ರಾಜಕೀಯ

3 ಡಿಸಿಎಂ ಹುದ್ದೆ ಸೃಷ್ಟಿಸಲು ಬೇಡಿಕೆ ಇಟ್ಟ ಸಹಕಾರ ಸಚಿವ ಕೆಎನ್ ರಾಜಣ್ಣ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ಸಂಘರ್ಷ ತೀವ್ರಗೊಂಡಿದೆ. ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಸಿಎಂ ಬಣದ ಪ್ರತಿಪಾದನೆ ಪಕ್ಷದೊಳಗೆ ಕಿಚ್ಚು ಹಚ್ಚಿದೆ. ಆದರೆ ಇದ್ಯಾವುದಕ್ಕೂ ಸಿದ್ದರಾಮಯ್ಯ ಬಣದ ಸಚಿವರು ಸೊಪ್ಪು ಹಾಕುತ್ತಿಲ್ಲ. ಬದಲಾಗಿ ಈ ವಿವಾದವನ್ನು ಇನ್ನಷ್ಟು ತೀವ್ರಗೊಳಿಸಲು ಯತ್ನಿಸುತ್ತಿದ್ದಾರೆ.

ಸಹಕಾರ ಸಚಿವ ಕೆಎನ್ ರಾಜಣ್ಣ ಮತ್ತೊಮ್ಮೆ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂದು ಪ್ರತಿಪಾದಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಅಂದ್ರೆ ಮೂರು ಡಿಸಿಎಂ ಹುದ್ದೆ ಸೃಷ್ಟಿ ಅತ್ಯಗತ್ಯ. ಒಂದೊಮ್ಮೆ ಕಡಿಮೆ ಸೀಟ್ ಗೆದ್ದರೆ ರಾಜ್ಯದಲ್ಲಿ ಸರ್ಕಾರವೇ ವಿಸರ್ಜನೆ ಆಗಬಹುದು ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನನ್ನ ಹೇಳಿಕೆ ಹಿಂದೆ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಮೂರು ಡಿಸಿಎಂ ಸೃಷ್ಟಿಸಿದ್ರೆ ಡಿಕೆ ಶಿವಕುಮಾರ್ ಪ್ರಾಮುಖ್ಯತೆಯೂ ಕಡಿಮೆ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಸದುದ್ದೇಶದಿಂದ ಈ ಸೂತ್ರ ಮುಂದಿಟ್ಟಿದ್ದೇನೆ ಅಷ್ಟೇ ಎಂದು ಕೆಎನ್ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಕೆಎನ್ ರಾಜಣ್ಣ ಅವರ ಮಾತುಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ.

ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಕೆಎನ್ ರಾಜಣ್ಣ ಬೇಡಿಕೆ ಬಗ್ಗೆ ಕಾಂಗ್ರೆಸ್ ನಾಯಕರು ಎಚ್ಚರಿಕೆಯ ಪ್ರತಿಕ್ರಿಯೆ ನೀಡತೊಡಗಿದ್ದಾರೆ. ಈ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವರಾದ ಕೆಹೆಚ್ ಮುನಿಯಪ್ಪ, ಸಂತೋಷ್ ಲಾಡ್ ಜಾರಿಕೊಂಡಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago