ಅಂತರಾಷ್ಟ್ರೀಯ

ಡೊನಾಲ್ಡ್ ಟ್ರಂಪ್ ಮಗನ X ಖಾತೆ ಹ್ಯಾಕ್​​, ತಂದೆ ಸತ್ತಿಲ್ಲ ಎಂದು ಸ್ಪಷ್ಟನೆ ನೀಡಿದ ಡೊನಾಲ್ಡ್ ಟ್ರಂಪ್ ರ ಮಗ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಗ ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ X ಖಾತೆಯನ್ನು ಹ್ಯಾಕ್​​ ಮಾಡಲಾಗಿದೆ. ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ ಖಾತೆಯಿಂದ ತಮ್ಮ ತಂದೆ ಅಂದರೆ ಡೊನಾಲ್ಡ್ ಟ್ರಂಪ್ ನಿಧನರಾಗಿದ್ದಾರೆ ಎಂಬ ಆಕ್ಷೇಪಾರ್ಹ ಟ್ವೀಟ್​​​ ಮಾಡಲಾಗಿದೆ. ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಇದರಿಂದ Xನಲ್ಲಿ ಭಾರೀ ಚರ್ಚೆಗಳು ನಡೆದಿತ್ತು.

Advertisement
Advertisement
Advertisement

ಈ ಟ್ವೀಟ್​​ನಲ್ಲಿ ನನ್ನ ತಂದೆ ಡೊನಾಲ್ಡ್ ಟ್ರಂಪ್ ನಿಧನರಾಗಿದ್ದಾರೆ. ನಾನು 2024ರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದೇನೆ ಎಂದು ಘೋಷಿಸಲು ನನಗೆ ದುಃಖವಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಸಂದೇಶಕ್ಕೆ X ಬಳಕೆದಾರರೂ ಹಿಗ್ಗಾಮುಗ್ಗ ಕಮೆಂಟ್​​ ಮಾಡಿದ್ದಾರೆ.

ಈ ನಕಲಿ ಸುದ್ದಿಯ ಬಗ್ಗೆ ತಿಳಿದು ಡೊನಾಲ್ಡ್ ಟ್ರಂಪ್ ಅವರು ತನ್ನ ಅಧಿಕೃತ ಮಾಧ್ಯಮದಲ್ಲಿ, ನಾನು ಆರೋಗ್ಯವಾಗಿ ಜೀವಂತವಾಗಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಈ ಹ್ಯಾಕ್​ ಬಗ್ಗೆ ಮೊದಲು ನ್ಯಾಷನಲ್ ಪಲ್ಸ್‌ನ ರಹೀಂ ಕಸಮ್ ಅವರು ಟ್ರಂಪ್ ಅವರ ಸಾಮಾಜಿಕ ಜಾಲತಾಣ ತಂಡಕ್ಕೆ ತಿಳಿಸಿದರು. ನಂತರ ಆ ತಂಡ ಈ ಬಗ್ಗೆ ಸ್ಪಷ್ಟನೆಯನ್ನು ಪಡೆದುಕೊಂಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದೆ. ಈ ಹ್ಯಾಕ್​​ ಆಗಿರುವ X ಖಾತೆಯಲ್ಲಿ ಎಲೋನ್ ಮಸ್ಕ್‌ ಮತ್ತು ಅಮೆರಿಕದ ಅಧ್ಯಕ್ಷ ಜೋ ಬಿಡನ್ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳು ಬಂದಿದೆ. ಇನ್ನು ಹ್ಯಾಕ್​​ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಾಗುವುದು ಎಂದು ಅಮೆರಿಕದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago