ಜೆಡಿಎಸ್​-ಬಿಜೆಪಿ ಮೈತ್ರಿಗೆ ಪೆಟ್ಟು ನೀಡಲು ಪ್ರಮುಖ ಅಸ್ತ್ರ ಪ್ರಯೋಗಿಸಲು ಮುಂದಾದ ಕಾಂಗ್ರೆಸ್

0
96

ಬೆಂಗಳೂರು, ಸೆ. 21: ಬಿಜೆಪಿ ಹಾಗೂ ಜೆಡಿಎಸ್​ ನಡುವಿನ ಮೈತ್ರಿ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇಂದು (ಸೆ.21) ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದು, ಬಿಜೆಪಿ ಹೈಕಮಾಂಡ್​ ನಾಯಕರ ಜೊತೆ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಇಂದು ರಾತ್ರಿ ವೇಳೆ ಮೈತ್ರಿ ಮಾತುಕತೆ ಮುಗಿಯಲಿದ್ದು, ನಾಳೆ(ಸೆ.22) ದೆಹಲಿಯಲ್ಲಿ ಉಭಯ ಪಕ್ಷಗಳ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಸಹ ಮೈತ್ರಿಗೆ ಪೆಟ್ಟು ನೀಡಲು ಆಪರೇಷನ್ ಹಸ್ತ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದ್ದು, ಇದಕ್ಕೆ ಹೈಕಮಾಂಡ್​, ರಾಜ್ಯ ಕಾಂಗ್ರೆಸ್​ ನಾಯಕರಿಗೆ ಗ್ರೀನ್​ ಸಿಗ್ನಲ್ ನೀಡಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ನಿನ್ನೆ(ಸೆ 20) ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದು, ಲೋಕಸಭಾ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಮಹತ್ವ ಚರ್ಚೆ ನಡೆಸಿದರು. ಅಲ್ಲದೇ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್​ ಸೇರಲು ಇಚ್ಛಿಸಿರುವ 15 ನಾಯಕರ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಇನ್ನು ಇದೇ ವೇಳೆ ಮೈತ್ರಿಗೆ ಪೆಟ್ಟು ನೀಡಲು ಆಪರೇಶನ್ ಹಸ್ತಕ್ಕೆ ಹೈಕಮಾಂಡ್​ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.

ಜೆಡಿಎಸ್​ ಹಾಗೂ ಬಿಜೆಪಿಯ ನಾಯಕರು ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರುವವರಿದ್ದರೆ ಸೇರಿಸಿಕೊಳ್ಳಿ. ಲೋಕಸಭಾ ಚುನಾವಣೆಗೆ ಲಾಭ ಆಗುವ ರೀತಿ ಆಪರೇಷನ್ ಹಸ್ತ ಮಾಡಬೇಕು ಎಂದು ಹೈಕಮಾಂಡ್​, ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಇನ್ನು ಸಭೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ತಂತ್ರಗಾರಿಕೆ ಕುರಿತು ಸುದೀರ್ಘ ಮಾತುಕತೆ ನಡೆದಿದೆ. ಸಚಿವ ಚಲುವರಾಯಸ್ವಾಮಿ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮತ್ತು ಕೆಲ ಪ್ರಮುಖ ನಾಯಕರು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಅಲ್ಲದೆ, ಒಕ್ಕಲಿಗರು ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಲಾಯಿತು. ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಬಹುದು ಎಂಬ ಮಾಹಿತಿ ಸಂಗ್ರಹ ಮಾಡಲಾಯಿತು. ಅಲ್ಲದೆ, JDS, ಬಿಜೆಪಿ ಮೈತ್ರಿ ಮಣಿಸಲು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ಕೂಡ ನಡೆದಿದೆ ಎನ್ನಲಾಗುತ್ತಿದೆ.

LEAVE A REPLY

Please enter your comment!
Please enter your name here