ಪುತ್ತೂರು, ಸೆ.21: ಕೌನ್ ಬನೇಗಾ ಕರೋಡ್ ಪತಿಯಲ್ಲಿ 25 ಲಕ್ಷ ಬಹುಮಾನ ಬಂದಿದೆ ಎಂದು ಹೇಳಿ ಮಹಿಳೆಯೊಬ್ಬರಿಂದ ಅಪರಿಚಿತ ವ್ಯಕ್ತಿ 13 ಲಕ್ಷ ಹಣ ವಸೂಲಿ ಮಾಡಿದ ಘಟನೆ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
ಪುತ್ತೂರು ನಿವಾಸಿಯಾದ ಝೀನತ್ ಬಾನು ಎಂಬವರು ವಂಚನೆಗೆ ಒಳಗಾದವರು.ಅವರು ನೀಡಿದ ದೂರಿನಂತೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿ ವಾಟ್ಸಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದು, ನೀವು 25 ಲಕ್ಷ ಲಾಟರಿ ಗೆದ್ದಿರುವುದಾಗಿ ತಿಳಿಸಿರುತ್ತಾರೆ. ನಂತರ ಸದ್ರಿ ಹಣವನ್ನು ಪಡೆಯುವರೇ ಟ್ಯಾಕ್ಸ್ ಕಟ್ಟಲು ಹಾಗೂ ಇನ್ನಿತರ ಚಾರ್ಜಸ್ ಗಳ ಕಾರಣ ಹೇಳಿ ಮಹಿಳೆಯಿಂದ 2022 ಮೇ ತಿಂಗಳಿನಿಂದ 2023 ಸಪ್ಟಂಬರ್ 13 ರವರೆಗಿನ ಅವಧಿಯಲ್ಲಿ ಅಪರಿಚಿತ ವ್ಯಕ್ತಿಯು ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು ರೂ. 12,93,200/- ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುತ್ತಾನೆ.
ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…