ಬೆಂಗಳೂರು, ಸೆ. 21: ಸಿಎಂ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಿದ್ದರಾಮಯ್ಯ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಸಲಾಗಿದ್ದು, ಇದು ಪ್ರಚಾರಕ್ಕಾಗಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ. ಅರ್ಜಿದಾರರು ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಹೈಕೋರ್ಟ್ ಮುಂದೂಡಿದೆ.
ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್ಗಳನ್ನು ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.
ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಪರ ವಕೀಲರಿಂದ ಇದಕ್ಕೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ಇದು ಪ್ರಚಾರಕ್ಕಾಗಿ ಮತ್ತು ಅರ್ಜಿದಾರರ ಊಹೆಗಳ ಮೇಲೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 6ಕ್ಕೆ ಮುಂದೂಡಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…