ಭಾರತ-ಆಸ್ಟ್ರೇಲಿಯಾ ನಡುವಣ 3 ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಮೊಹಾಲಿಯ ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅತ್ತ ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯುತ್ತಿರುವುದರಿಂದ ಆಸ್ಟ್ರೇಲಿಯಾ ತಂಡ ಕೂಡ ಫುಲ್ ಖುಷಿಯಲ್ಲಿದೆ. ಇದಕ್ಕೆ ಮುಖ್ಯ ಕಾರಣ ಆಸೀಸ್ ಪಾಲಿಗೆ ಪಿಸಿಎ ಪಿಚ್ ತವರು ಮೈದಾನದಂತಿರುವುದು.
ಮೊಹಾಲಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇದುವರೆಗೆ 5 ಏಕದಿನ ಪಂದ್ಯಗಳನ್ನಾಡಲಿದೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅತ್ತ ತವರಿನ ಹುಲಿಗಳನ್ನು ಪಿಸಿಎ ಪಿಚ್ನಲ್ಲಿ ಆಸ್ಟ್ರೇಲಿಯಾ 4 ಬಾರಿ ಮಣಿಸಿದೆ.
ಇಲ್ಲಿ ವಿಶೇಷ ಎಂದರೆ ಈ ಪಿಚ್ನಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಆಸ್ಟ್ರೇಲಿಯಾ ವಿರುದ್ಧ ಗೆದ್ದಿರುವುದು 1996 ರಲ್ಲಿ. ಇದಾದ ಬಳಿಕ ಸತತ ನಾಲ್ಕು ಪಂದ್ಯಗಳಲ್ಲಿ ಭಾರತಕ್ಕೆ ಆಸೀಸ್ ಪಡೆಗೆ ಸೋಲುಣಿಸಿದೆ.
ಇನ್ನು ಈ ಮೈದಾನದಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ 358 ರನ್ ಬಾರಿಸಿತ್ತು. ಆದರೆ ಈ ಬೃಹತ್ ಮೊತ್ತವನ್ನು ಚೇಸ್ ಮಾಡಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿತ್ತು ಎಂಬುದು ಉಲ್ಲೇಖಾರ್ಹ. ಹೀಗಾಗಿ ಮೊಹಾಲಿ ಮೈದಾನದಲ್ಲಿ ಮತ್ತೊಮ್ಮೆ ಗೆಲ್ಲುವ ವಿಶ್ವಾಸದಲ್ಲಿದೆ ಆಸ್ಟ್ರೇಲಿಯಾ ತಂಡ.