ಕ್ರೀಡಾ ಸುದ್ದಿ

ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದ ಟೀಂ ಇಂಡಿಯಾ

ಮೊಹಾಲಿಯಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ನಾಯಕ ಕೆಎಲ್ ರಾಹುಲ್ ಅವರ ಅಜೇಯ 58 ರನ್‌ಗಳ ಇನ್ನಿಂಗ್ಸ್ ಹಾಗೂ ಆರಂಭಿಕರಿಬ್ಬರ ಶತಕದ ಜೊತೆಯಾಟದ ಜೊತೆಗೆ ಸೂರ್ಯಕುಮಾರ್ ಅವರ ನಿರ್ಣಾಯಕ ಅರ್ಧಶತಕದ ನೆರವಿನೊಂದಿಗೆ ಭಾರತ ಈಗ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Advertisement
Advertisement
Advertisement

ವಾಸ್ತವವಾಗಿ ಈ ಪಂದ್ಯದಲ್ಲಿ ಟೀಂ ಇಂಡಿಯಾ ತಂಡದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಕುಲ್ದೀಪ್ ಯಾದವ್ ಇಲ್ಲದೆ ಕಣಕ್ಕಿಳಿದಿತ್ತು. ಅದಾಗ್ಯೂ ಯುವ ಪಡೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊಹಮ್ಮದ್ ಶಮಿ ದಾಳಿಗೆ ನಲುಗಿ 276 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತ ನಾಲ್ವರ ಅರ್ಧಶತಕದ ಆಧಾರದ ಮೇಲೆ 49ನೇ ಓವರ್‌ನಲ್ಲಿ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಏಕದಿನ ಮಾದರಿಯಲ್ಲಿ ನಂಬರ್ 1 ಸ್ಥಾನವನ್ನೂ ಕೂಡ ಅಲಂಕರಿಸಿದೆ.

2023ರ ವಿಶ್ವಕಪ್‌ಗೆ ಸಿದ್ಧತೆಯಾಗಿ ನಡೆಯುತ್ತಿರುವ ಈ ಸರಣಿಯ ಮೊದಲ ಮತ್ತು ಎರಡನೇ ಪಂದ್ಯಗಳಿಗೆ ಟೀಂ ಇಂಡಿಯಾದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆಸ್ಟ್ರೇಲಿಯಾ ಕೂಡ ತನ್ನ ಪ್ರಮುಖ ಆಟಗಾರರಿಲ್ಲದೆ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಹೀಗಿರುವಾಗ ಬಹುತೇಕ ಸಮಬಲದ ಪೈಪೋಟಿಯನ್ನು ನಿರೀಕ್ಷಿಸಲಾಗಿತ್ತು. ಆದರೆ ಆರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಂ ಇಂಡಿಯಾ ಜಯಭೇರಿ ಬಾರಿಸಿದೆ. ಇಷ್ಟೇ ಅಲ್ಲ, ಮೊಹಾಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 27 ವರ್ಷಗಳ ನಂತರ ಏಕದಿನ ಪಂದ್ಯವನ್ನು ಗೆದ್ದ ಸಾಧನೆ ಮಾಡಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago