ರಾಜ್ಯ

ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಇಂದು ಮಂಡ್ಯ ಹಾಗೂ ಮದ್ದೂರ್ ಬಂದ್ ಮಾಡಿ ಪ್ರತಿಭಟನೆ

ಮಂಡ್ಯ: ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದು, ಇಂದು ಮಂಡ್ಯ ಹಾಗೂ ಮದ್ದೂರ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

Advertisement
Advertisement
Advertisement

ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳಿಂದ ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎರಡೂ ನಗರಗಳು ಸಂಪೂರ್ಣ ಸ್ಥಬ್ದವಾಗಲಿದೆ. ವರ್ತಕರ ಸಂಘ, ಹೋಟೆಲ್, ಪೆಟ್ರೋಲ್ ಬಂಕ್ ಮಾಲೀಕರು, ಆಟೋ ಚಾಲಕರು, ಖಾಸಗಿ ಬಸ್, ಲಾರಿ ಮಾಲೀಕರು ಸಂಘಗಳು ಬೆಂಬಲ ಸೂಚಿಸಿದ್ದು. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಿಂದಲೂ ಬಂದ್ ಬೆಂಬಲಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಳಗ್ಗೆ 8ಗಂಟೆಗೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದ್ದು, ಮತ್ತೊಂದು ತಂಡದಿಂದ ನಗರದ ಹಲವು ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಯಲಿದೆ. ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಬೆಂಬಲಿಸುವಂತೆ ಪ್ರತಿಭಟನಾಕಾರರು ಮನವಿ ಮಾಡಲಿದ್ದಾರೆ.

10 ಗಂಟೆಗೆ ಸಂಜಯ ವೃತ್ತದಲ್ಲಿ ಪ್ರತಿಭಟನೆ, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಿದ್ದು, ರೈತ ಸಂಘ, ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ. ಮದ್ದೂರಿನಲ್ಲಿ ಬೆಳಗ್ಗೆ 9 ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ. ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಬೈಕ್ ರ್ಯಾಲಿ, ಬಳಿಕ ಮದ್ದೂರಿನ ಕೊಲ್ಲಿ ಸರ್ಕಲ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಬಂದ್ ಹಿನ್ನೆಲೆ ಎರಡೂ ನಗರಗಳಲ್ಲಿ ಖಾಕಿ ಅಲರ್ಟ್ ಆಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಅಹಿತಕರ ಘಟನೆ ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಕ್ಕೆ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಎಸ್‍ಪಿ, ಎಎಸ್‍ಪಿ, ಮೂವರು ಡಿವೈಎಸ್‍ಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಸೇರಿ 400 ಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಡಲಾಗಿದೆ. ಜೊತೆಗೆ 6 ಕೆ.ಎಸ್.ಆರ್.ಪಿ, 5 ಡಿಎಆರ್ ತುಕಡಿ ನಿಯೋಜಿಸಲಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago