ಕಾವೇರಿ ನದಿ ನೀರು ಹೋರಾಟಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಂಡ್ಯ ಥಿಯೇಟರ್ ಮಾಲೀಕರು ಕೂಡ ಬೆಂಬಲ ಸೂಚಿಸಿದ್ದಾರೆ. ಚಿತ್ರಮಂದಿರಗಳನ್ನು ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿದಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಮಾಡಿದರೆ, ರಾಜ್ಯಾದ್ಯಂತ ಚಿತ್ರಮಂದಿರಗಳು ಕೂಡ ಬಂದ್ ಆಗಲಿವೆ.
ಸ್ಯಾಂಡಲ್ ವುಡ್ ನಟ ನಟಿಯರು ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯ ಭಾಗದ ರೈತರ ಪರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೆ, ನಟ ಅಭಿಷೇಕ್ ಅಂಬರೀಶ್ ನೇರವಾಗಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.ಮಂಡ್ಯದ ಎಂಪಿ ಆಗಿರುವ ನಟಿ ಸುಮಲತಾ ಅಂಬರೀಶ್ ಕೂಡ ಹಲವು ದಿನಗಳಿಂದ ಹೋರಾಟದಲ್ಲಿ ಭಾಗಿಯಾಗಿದ್ದಾರೆ.