ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಬೆಳಗ್ಗೆಯಿಂದ 65ನೇ ವಾರ್ಷಿಕ ಸಭೆ ಆರಂಭವಾಯಿತು. ಹಲವಾರು ಚರ್ಚೆಗಳನ್ನು ಈ ಸಂದರ್ಭದಲ್ಲಿ ಮಾಡಲಾಯಿತು. ನಂತರ ಮಧ್ಯಾಹ್ನ 2 ಗಂಟೆ ಮತದಾನ ಪ್ರಕ್ರಿಯೆ ನಡೆದಿದ್ದು ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಇಂದೇ ರಾತ್ರಿ ಫಲಿತಾಂಶ ಹೊರ ಬೀಳಲಿದೆ.
ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಾಲ್ವರ ಮಧ್ಯ ತೀವ್ರ ಸ್ಪರ್ಧೆ ನಡೆದಿದ್ದು ಶಿಲ್ಪಾ ಶ್ರೀನಿವಾಸ್, ಮಾರ್ಸ್ ಸುರೇಶ್, ಎಂ.ಎನ್. ಸುರೇಶ್ ಮತ್ತು ಎ.ಗಣೇಶ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ. ನಾಲ್ಕು ಬಣಗಳ ನಡುವೆ ತುರುಸಿನ ಮತದಾನ ನಡೆಯುತ್ತಿದೆ. ಇಂದು ರಾತ್ರಿ ವಿಜಯ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂದು ಕಾದು ನೋಡಬೇಕು.
ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಹಲವು ಸ್ಥಾನಗಳಿಗೂ ಇಂದು ಚುನಾವಣೆ ನಡೆದಿದೆ. ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಇಂದು ಇವರುಗಳನ್ನು ಮತದಾನ ಮಾಡುವ ಮೂಲಕ ಆಯ್ಕೆ ಮಾಡಲಿದ್ದಾರೆ.