ಮಂಗಳೂರು: ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಸಂಘನಿಕೇತನದಲ್ಲಿ ನಡೆಯುತ್ತಿರುವ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಕ್ರೈಸ್ತ ಸಮುದಾಯದವರು ಭೇಟಿ ನೀಡಿದರು.
ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಅಡಿಯಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರಾಯ್ ಕ್ಯಾಸ್ಟಲಿನೊ ನೇತೃತ್ವದಲ್ಲಿ ಭೇಟಿ ನೀಡಿದ ಮುಖಂಡರನ್ನು ಆರ್‌ಎಸ್‌ಎಸ್ ದಕ್ಷಿಣ ಪ್ರಾಂತದ ಸರಸಂಘ ಚಾಲಕ ವಾಮನ ಶೆಣೈ ಬರಮಾಡಿಕೊಂಡರು.
ಕ್ರೈಸ್ತ ಸಮುದಾಯದ ಪ್ರಮುಖರು ಗಣೇಶನಿಗೆ ಪೂಜೆ ಸಲ್ಲಿಸಿದರು. ಸಾಮರಸ್ಯ ಹಾಗೂ ಸೌಹಾರ್ದದ ಉದ್ದೇಶದಿಂದ ಪ್ರತಿವರ್ಷ ಗಣೇಶೋತ್ಸವಕ್ಕೆ ಕ್ರೈಸ್ತ ಮುಖಂಡರು ಭೇಟಿ ನೀಡುವ ಪದ್ಧತಿ ರೂಢಿಯಲ್ಲಿದೆ.