ಬೆಂಗಳೂರು: ನನ್ನ ಸಹೋದರಿ ತೇಜಸ್ವಿನಿ ಧೈರ್ಯ ಮಾಡಿ ರಾಜಕೀಯದಲ್ಲಿ ಮುನ್ನುಗ್ಗಬೇಕು. ಅನಂತಕುಮಾರ್ ಅವರ ಜೊತೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವಿದೆ. ನೀವು ರಾಜಕೀಯಕ್ಕೆ ಬರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್, ತೇಜಸ್ವಿನಿ ಅನಂತಕುಮಾರ್ ಅವರನ್ನು ರಾಜಕೀಯಕ್ಕೆ ಆಹ್ವಾನಿಸಿದ್ದಾರೆ.
ಅನಂತ ನಮನ-64 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೋ ಹಸುಗಳು ಹುಟ್ಟುತ್ತವೆ. ಆದರೆ ಎಲ್ಲವೂ ಬಸವ ಆಗಲು ಸಾಧ್ಯವಿಲ್ಲ. ನೀವು ಇಲ್ಲೇ ಅಡುಗೆ ಮನೆಯಲ್ಲಿ ಅದಮ್ಯ ಚೇತನದ ಜೊತೆಯಲ್ಲೇ ಇರಬೇಕಾಗುತ್ತದೆ. ನಿಮ್ಮ ಹಿಂದೆ ದೊಡ್ಡ ಪಡೆ ಇದೆ, ಸಮಾಜವಿದೆ. ಮುನ್ನುಗ್ಗಿ, ನಿಮ್ಮನ್ನು ನಂಬಿಕೊಂಡಿರುವ ಹಿಂಬಾಲಕರನ್ನು ರಕ್ಷಣೆ ಮಾಡಿ ಎಂದರು.