ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಯಾವಾಗ ಎಂಬುದಕ್ಕೆ ಈಗಾಗಲೇ ಉತ್ತರ ಸಿಕ್ಕಿದೆ. ಅಕ್ಟೋಬರ್ 8ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋ ಶುರುವಾಗಲಿದೆ. ವಾಹಿನಿಯ ‘ಅನುಬಂಧ 2023’ ಅವಾರ್ಡ್ಸ್ ಸಮಾರಂಭದಲ್ಲಿ ಬಿಗ್ ಬಾಸ್ ಯಾವಾಗ ಶುರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯಾರೆಲ್ಲಾ ಬಿಗ್ ಬಾಸ್ ಮನೆಯೊಳಗಡೆ ಹೋಗಲಿದ್ದಾರೆ ಎಂಬ ಪ್ರಶ್ನೆ ಏಳೋದು ಸಹಜ. ಮೊದಲ ಬಾರಿಗೆ ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಮೊದಲ ಸ್ಪರ್ಧಿಯನ್ನು ಕಲರ್ಸ್ ವಾಹಿನಿ ರಿವೀಲ್ ಮಾಡಿದೆ.
ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ.
ಬೆಸ್ಟ್ ರೇಟೆಡ್ ಚಲನಚಿತ್ರ – 777 ಚಾರ್ಲಿ. ಬಿಗ್ ಬಾಸ್ ಕನ್ನಡ ಸೀಸನ್ 10 ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡ್ತಿರೋ ಚಾರ್ಲಿ!! ಅಭಿನಂದನೆಗಳು ಚಾರ್ಲಿ ಎಂದು ವಾಹಿನಿಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಚಾರ್ಲಿ ಮೊದಲ ಸ್ಪರ್ಧಿಯಾಗಿ ದೊಡ್ಮನೆಗೆ ಕಾಲಿಡುತ್ತಿದೆ. ಅಂದಹಾಗೆ, 777 ಚಾರ್ಲಿ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಜೊತೆ ಚಾರ್ಲಿ ಕೂಡ ಮನೋಜ್ಞವಾಗಿ ಅಭಿನಯಿಸುವ ಪ್ರೇಕ್ಷಕರ ಮನಗೆದ್ದಿತ್ತು.
ಬಿಗ್ ಬಾಸ್ ಆಟ ಮುಗಿಯುವವರೆಗೆ ಚಾರ್ಲಿ ಆ ಮನೆಯಲ್ಲಿ ಇರುತ್ತಾ ಇಲ್ವಾ ಅನ್ನೋದರ ಬಗ್ಗೆ ಮಾಹಿತಿ ಇಲ್ಲ. ಆಗಾಗ ಅದು ದೊಡ್ಮನೆಯೊಳಗಡೆ ಎಂಟ್ರಿ ಕೊಡಬಹುದು. ಈ ಬಗ್ಗೆ ಬಿಗ್ ಬಾಸ್ ತಂಡವೇ ಹೆಚ್ಚಿನ ಮಾಹಿತಿ ನೀಡಬೇಕಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…