ಕ್ರೀಡಾ ಸುದ್ದಿ

ಬಾಂಗ್ಲಾದೇಶವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ತಂಡವು ಬಾಂಗ್ಲಾದೇಶವನ್ನ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಸೋಮವಾರ ಶ್ರೀಲಂಕಾ ವಿರುದ್ಧ ಚಿನ್ನದ ಪದಕಕ್ಕಾಗಿ ಕಾದಾಟ ನಡೆಸಲಿದೆ.

ಝೆಜಿಯಾಂಗ್ ಟೆಕ್‌ ವಿವಿ ಕ್ರೀಡಾಂಗಣದಲ್ಲಿಂದು ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ಫೈನಲ್‌ ತಲುಪಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ 17.5 ಓವರ್‌ಗಳಲ್ಲಿ ಕೇವಲ 51 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಭಾರತೀಯ ಮಹಿಳಾ ತಂಡ 8 ಓವರ್‌ಗಳಲ್ಲೇ 52 ರನ್‌ ಗಳಿಸಿ ಗೆಲುವು ಸಾಧಿಸಿತು.

ಮೊದಲು ಕ್ರೀಸ್‌ಗಿಳಿದ ಬಾಂಗ್ಲಾದೇಶ ತಂಡ ಟೀಂ ಇಂಡಿಯಾದ ಬಿಗಿ ಬೌಲಿಂಗ್‌ ಹಿಡಿತಕ್ಕೆ ತತ್ತರಿಸಿತು. ಟೀಂ ಇಂಡಿಯಾ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಪೂಜಾ ವಸ್ತ್ರಾಕರ್‌ 4 ಓವರ್‌ಗಳಲ್ಲಿ 17 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಕಿತ್ತರೆ, ಟಿಟಾಸ್‌ ಸಾಧು, ಅಮನ್‌ಜ್ಯೋತ್‌ ಕೌರ್‌, ರಾಜೇಶ್ವರಿ ಗಾಯಕ್ವಾಡ್‌ ಹಾಗೂ ದೇವಿಕಾ ವೈದ್ಯ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago