ಮಲಯಾಳಂ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಜಿ ಜಾರ್ಜ್ ಭಾನುವಾರ (ಸೆ.24) ವಿಧಿವಶರಾಗಿದ್ದಾರೆ. ಕೊಚ್ಚಿಯ ವೃದ್ಧಾಶ್ರಮದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ.
ಕಳೆದ 5 ವರ್ಷಗಳಿಂದ ಕೆ.ಜಿ ಜಾರ್ಜ್ ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದರು. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ 78ನೇ ವಯಸ್ಸಿಗೆ ನಟ ನಿಧನರಾಗಿದ್ದಾರೆ. ಹಿರಿಯ ನಟನ ನಿಧನಕ್ಕೆ ಚಿತ್ರರಂಗದ ನಟ-ನಟಿಯರು, ರಾಜಕಾರಣಿಗಳು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.