ಚಿತ್ರದುರ್ಗ, ಸೆ.24: ನದಿ ಆಧಾರಿತ ನೀರು ನಿರ್ವಹಣೆ ಕಾನೂನನ್ನು ಜಾರಿಗೆ ತರಬೇಕು. ಆ ಮೂಲಕ ಕಾವೇರಿ, ಕೃಷ್ಣ, ಮಹದಾಯಿ ಯೋಜನೆಗೆ ಶಾಶ್ವತ ಮುಕ್ತಿ ಸಿಗಬೇಕು. ಈ ವಿಚಾರವಾಗಿ ತರಳಬಾಳು ಶ್ರೀಗಳ ಜೊತೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದರು.
ಕರ್ನಾಟಕ ತಮಿಳುನಾಡು ರಾಜ್ಯಗಳ ನಡುವಿನ ಕಾವೇರಿ ನದಿ ನೀರು ವಿವಾದ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಈ ಬಗ್ಗೆ ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದಲ್ಲಿ ನಡೆದ ತರಳುಬಾಳು ಮಠದ ಶಿವಕುಮಾರ ಶ್ರೀ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಅಂತಾರಾಜ್ಯ ನದಿ ವಿವಾದಗಳ ಕಾನೂನಿನಿಂದ ಯಾವುದೇ ಇತ್ಯರ್ಥ ಆಗಿಲ್ಲ. ವಿವಾದ ಬಗೆಹರಿಸುವುದಕ್ಕಿಂತ ವಿವಾದ ಹುಟ್ಟುಹಾಕುತ್ತಿದೆ ಎಂದರು.
55 ವರ್ಷ ಕಳೆದರೂ ಒಂದು ವಿವಾದ ಕೂಡ ಬಗೆಹರೆದಿಲ್ಲ. ಕಾಲ ಬದಲಾದಂತೆ ನೀರಿನ ಬಳಕೆ ಪ್ರಮಾಣ ಕೂಡ ಬದಲಾಗುತ್ತಿದೆ. ಕೃಷಿ, ಕುಡಿಯುವ ನೀರಿನ ವಲಯದಲ್ಲಿ ವ್ಯತ್ಯಾಸವಿದೆ. ಬೇಸಾಯ ಹಾಗೂ ಕೈಗಾರಿಕೆಗೆ ನೀರಿನ ಬಳಕೆಯಲ್ಲಿ ಸಂಘರ್ಷವಿದೆ ಎಂದರು. ಬೆಂಗಳೂರು ನಗರಕ್ಕೆ ಇಂದು 25 ಟಿಎಂಸಿ ನೀರಿನ ಅಗತ್ಯವಿದೆ ಅಂತಾನೂ ಹೇಳಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…