ಚಲನಚಿತ್ರ

ಕನ್ನಡದ ಡ್ಯಾನಿ ಕುಟ್ಟಪ್ಪ ತೆಲುಗಿನ ‘ಸ್ಕಂದ’ ಚಿತ್ರದಲ್ಲಿ ನಟನೆ

ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್‍ ನಿರ್ದೇಶಕ ಬೋಯಾಪಾಟಿ ಶ್ರೀನು ನಿರ್ದೇಶನದ, ರಾಮ್‍ ಪೋತಿನೇನಿ ಅಭಿನಯದ ‘ಸ್ಕಂದ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Advertisement
Advertisement
Advertisement

ಡ್ಯಾನಿಗೆ ಟಾಲಿವುಡ್‍ ಹೊಸದೇನಲ್ಲ. ‘ಬಾಹುಬಲಿ’ ಚಿತ್ರದ ಮೂಲಕ ತೆಲುಗಿಗೆ ಹೊರಟ ಅವರು, ನಂತರ ‘ಗದ್ದಲಕೊಂಡ ಗಣೇಶ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಈಗ ‘ಸ್ಕಂದ’ ಚಿತ್ರದಲ್ಲಿ ಅತೀ ಮುಖ್ಯವಾದ ನೆಗೆಟಿವ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‍ನಲ್ಲಿ ಡ್ಯಾನಿ ಕುಟ್ಟಪ್ಪ ಅವರ ಪಾತ್ರದ ಪರಿಚಯವೂ ಇದೆ.

ಅದರ ಜೊತೆಗೆ, ಇತ್ತೀಚೆಗೆ ನಡೆದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕ ಬೋಯಾಪಾಟಿ ಶ್ರೀನು, ಡ್ಯಾನಿ ಕುಟ್ಟಪ್ಪ ಅವರನ್ನು ಆಂಧ್ರದ ಜನತೆಗೆ ಪರಿಚಯಿಸಿಕೊಡುವ ಜೊತೆಗೆ, ಅವರ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಡ್ಯಾನಿ ಬಹಳ ಚೆನ್ನಾಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ ಎಂದು ಸಾವಿರಾರು ಜನರ ಮುಂದೆ ಹೊಗಳಿದ್ದಾರೆ.

ಸ್ಕಂದ’ ಚಿತ್ರಕ್ಕಾಗಿ 20 ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರಂತೆ ಡ್ಯಾನಿ ಕುಟ್ಟಪ್ಪ. ರಾಮೋಜಿ ಫಿಲಂ ಸಿಟಿ, ಅನ್ನಪೂರ್ಣ ಸ್ಟುಡಿಯೋಸ್‍ ಮುಂತಾದ ಕಡೆ ಚಿತ್ರೀಕರಣ ನಡೆದಿದ್ದು, ಹಲವು ಸಾಹಸಮಯ ಸನ್ನಿವೇಶಗಳಲ್ಲಿ ಭಾಗವಹಿಸಿದ್ದಾರೆ. ತಮ್ಮ ಪಾತ್ರವನ್ನು Rude and Rough ಎಂದು ಬಣ್ಣಿಸುವ ಅವರು, ಈ ಚಿತ್ರವು ತಮ್ಮ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.

ಇನ್ನು, ಮುಂಬರುವ ದಿನಗಳಲ್ಲಿ ಕನ್ನಡದಲ್ಲೂ ಹೊಸಬರು, ಹಳಬರು ಎನ್ನದೇ ಎಲ್ಲರೊಂದಿಗೂ ಕೆಲಸ ಮಾಡಲು ಎದುರು ನೋಡುತ್ತಿರುವ ಡ್ಯಾನಿ ಕುಟ್ಟಪ್ಪ, ‘ಇಂಥವರು ಇಂಥ ಪಾತ್ರ ಮಾಡಬೇಕು ಎನ್ನುವುದಕ್ಕಿಂತ ಆ ಪಾತ್ರದ ಕುರಿತು ಆರೋಗ್ಯಕರ ಚರ್ಚೆಗಳಾಗಬೇಕು. ಒಬ್ಬ ನಿರ್ದೇಶಕ ಮತ್ತು ನಟನ ನಡುವೆ ಚರ್ಚೆಗಳಾದಾಗ, ಒಂದೊಳ್ಳೆಯ ಪಾತ್ರ ಮತ್ತು ಚಿತ್ರವನ್ನು ಮಾಡಬಹುದು’ ಎನ್ನುತ್ತಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago