ರಾಜ್ಯ

ಸೇನಾ ಸಿಬ್ಬಂದಿಯ ಕೈಗಳನ್ನು ಕಟ್ಟಿ ಹಾಕಿ ಥಳಿಸಿ, ಬೆನ್ನಿನಲ್ಲಿ PFI ಎಂದು ಬರೆದ ಕಿಡಿಗೇಡಿಗಳು

ತಿರುವನಂತಪುರಂ: ಸೇನಾ ಸಿಬ್ಬಂದಿಯೊಬ್ಬರ ಕೈಗಳನ್ನು ಹಿಂದಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿ ಬಳಿಕ ಬೆನ್ನಿನಲ್ಲಿ ಪಿಎಫ್‍ಐ ಎಂದು ಕಿಡಿಗೇಡಿಗಳು ಬರೆದ ಘಟನೆಯೊಂದು ಕೇರಳದಲ್ಲಿ ಬೆಳಕಿಗೆ ಬಂದಿದೆ.

Advertisement
Advertisement
Advertisement

ಈ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಸೇನಾ ಸಿಬ್ಬಂದಿಯು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಹಲ್ಲೆಗೊಳಗಾದ ಸೇನಾ ಸಿಬ್ಬಂದಿಯನ್ನು ಶೈನ್ ಕುಮಾರ್ ಎಂದು ಗುರುತಿಸಲಾಗಿದೆ. ಇವರ ನಿವಾಸ ಕಡಕ್ಕಲ್ ಹತ್ತಿರದ ರಬ್ಬರ್ ತೋಟದಲ್ಲಿ 6 ಜನರಿದ್ದ ಗುಂಪು ಭಾನುವಾರ ರಾತ್ರಿ ಈ ಕೃತ್ಯ ಎಸಗಿದೆ. ಟೇಪ್‍ನಿಂದ ತನ್ನ ಎರಡೂ ಕೈಗಳನ್ನು ಹಿಂದಕ್ಕೆ ಕಟ್ಟಿ, ಥಳಿಸಿ ಬಳಿಕ ಬೆನ್ನಲ್ಲಿ ಹಸಿರು ಬಣ್ಣ ಪೈಂಟ್‍ನಲ್ಲಿ ಪಿಎಫ್‍ಐ ಎಂದು ಬರೆದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಅವರು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ನಿಷೇಧಿತ ಪಿಎಫ್‍ಐ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕೇರಳದ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ದಿನ ಈ ಘಟನೆ ವರದಿಯಾಗಿದೆ. ಎರ್ನಾಕುಲಂ, ಮಲಪ್ಪುರಂ, ವಯನಾಡ್ ಮತ್ತು ತ್ರಿಶೂರ್ ಸೇರಿದಂತೆ ಕನಿಷ್ಠ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ. ಸೋಮವಾರ ಬೆಳಗ್ಗೆ ಆರಂಭವಾದ ದಾಳಿಗಳು ಸಿಆರ್‍ಪಿಎಫ್ ಮತ್ತು ಕೇರಳ ಪೊಲೀಸ್ ಸಿಬ್ಬಂದಿಯ ನೆರವಿನೊಂದಿಗೆ ಮುಂದುವರಿದಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago