ದೇಶ

ಭಾರತವನ್ನ ಹಲವು ದೇಶಗಳಾಗಿ ವಿಭಜಿಸುವ ಹುನ್ನಾರ – ಖಲಿಸ್ತಾನಿ ಉಗ್ರನ ಕುತಂತ್ರ ಬಯಲು

ನವದೆಹಲಿ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಭಾರತ ದೇಶವನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಹಲವು ದೇಶಗಳನ್ನಾಗಿ ವಿಭಜಿಸುವ ಗುರಿ ಹೊಂದಿದ್ದ. ಅದು ಅವನ ಅಜೆಂಡಾ ಆಗಿತ್ತು ಅನ್ನೋ ಸ್ಫೋಟಕ ಮಾಹಿತಿ ಗುಪ್ತಚರ ಇಲಾಖೆಯ ಉನ್ನತ ಮೂಲಗಳಿಂದ ತಿಳಿದುಬಂದಿದೆ.

Advertisement
Advertisement
Advertisement

ಕಳೆದ ವಾರವಷ್ಟೇ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುಗೆ ಸೇರಿದ ಆಸ್ತಿಗಳನ್ನ NIA ತನ್ನ ವಶಕ್ಕೆ ತೆಗೆದುಕೊಂಡಿತ್ತು. ಪಂಜಾಬ್ ರಾಜ್ಯದ ಚಂಡೀಗಢ ಹಾಗೂ ಅಮೃತಸರದಲ್ಲಿ ಇದ್ದ ಗುರುಪತ್ವಂತ್ ಸಿಂಗ್ ಪನ್ನುಗೆ ಸೇರಿದ ಮನೆಗಳನ್ನ ವಶಕ್ಕೆ ಪಡೆಯಲಾಗಿತ್ತು.

ನಿಷೇಧಿತ ಸಿಖ್ಸ್‌ ಫಾರ್ ಜಸ್ಟೀಸ್ ಸಂಘಟನೆಯ ಮುಖ್ಯಸ್ಥನಾಗಿರುವ ಪನ್ನು, ಭಾರತ ದೇಶದ ಏಕತೆ ಹಾಗೂ ಸಮಗ್ರತೆಗೆ ಧಕ್ಕೆ ತರುವ ರೀತಿ ಹಾಗೂ ಸವಾಲೊಡ್ಡುವ ರೀತಿ ಆಡಿಯೋ ಸಂದೇಶಗಳನ್ನ ರವಾನಿಸುತ್ತಿದ್ದ. ಎಲ್ಲಕ್ಕಿಂತ ಹೆಚ್ಚಾಗಿ ಈತ ಪಂಜಾಬ್ ರಾಜ್ಯವನ್ನ ಖಲಿಸ್ತಾನ ದೇಶವನ್ನಾಗಿ ಮಾಡುವ ಉದ್ದೇಶ ಹೊಂದಿದ್ದ. ಅಷ್ಟು ಸಾಲದೇ ಕಾಶ್ಮೀರವನ್ನ ಪ್ರತ್ಯೇಕ ರಾಷ್ಟ್ರ ಆಗಬೇಕು, ಮುಸ್ಲಿಮರ ದೇಶ ಆಗಬೇಕು ಎಂದು ಬಯಸಿದ್ದ ಅನ್ನೋ ಮಾಹಿತಿ ಕೂಡ ಗುಪ್ತಚರ ಇಲಾಖೆ ಮೂಲಗಳಿಂದ ಬೆಳಕಿಗೆ ಬಂದಿದೆ.

ಹಾದಿ ತಪ್ಪಿದ ಯುವಕರನ್ನೇ ಗುರಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಪನ್ನು, ತನ್ನ ಸಿಖ್ಸ್‌ ಫಾರ್ ಜಸ್ಟೀಸ್ ಸಂಘಟನೆ ಹೆಸರಲ್ಲಿ ಇಂಟರ್ನೆಟ್ ಮೂಲಕವೂ ದ್ವೇಷ ಹಾಗೂ ಮತಾಂದತೆ ಹರಡುವ ಕೆಲಸ ಮಾಡುತ್ತಿದ್ದ. ಯುವಕರು ಭಯೋತ್ಪಾದಕ ಕೃತ್ಯ ಎಸಗಲು ಪ್ರಚೋದಿಸುತ್ತಿದ್ದ. ಈ ಮೂಲಕ ಆತ ಪ್ರತ್ಯೇಕ ಖಲಿಸ್ತಾನ ದೇಶಕ್ಕಾಗಿ ಹೋರಾಟ ಮಾಡುವಂತೆ ಹುರಿದುಂಬಿಸುತ್ತಿದ್ದ. ಹೀಗಾಗಿ, 2019ರಲ್ಲೇ ಭಾರತ ಸರ್ಕಾರವು ಸಿಖ್ಸ್‌ ಫಾರ್ ಜಸ್ಟೀಸ್ ಸಂಘಟನೆಯನ್ನ ನಿಷೇಧ ಮಾಡಿತ್ತು.

ಜುಲೈ 2020ರಲ್ಲೇ ಭಾರತ ಸರ್ಕಾರದ ಗೃಹ ಇಲಾಖೆ ಗುರುಪತ್ವಂತ್ ಸಿಂಗ್ ಪನ್ನುನನ್ನು ಉಗ್ರಗಾಮಿ ಎಂದು ಹೆಸರಿಸಿತ್ತು. ಈತನ ಮಾಹಿತಿಯನ್ನು ಇಂಟರ್‌ಪೋಲ್‌ಗೂ ನೀಡಿತ್ತು. ರೆಡ್ ಕಾರ್ನರ್ ನೋಟಿಸ್ ಹೊರಡಿಸುವಂತೆ ಆಗ್ರಹಿಸಿತ್ತು. ಆದರೆ, ಭಾರತದ ಮನವಿಯನ್ನು ಇಂಟರ್‌ಪೋಲ್ ತಿರಸ್ಕರಿಸಿತ್ತು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago