ಬೆಂಗಳೂರು: ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರು ಬಂದ್‍ಗೆ ಕರೆ ಕೊಟ್ಟಿದ್ದು, ಆದರೆ ಎಂದಿನಂತೆ ನಗರದಲ್ಲಿ ಬಸ್ ಸಂಚಾರ ಇರಲಿದೆ ಎಂದು ಬಿಎಂಟಿಸಿ ಸ್ಪಷ್ಟನೆ ನೀಡಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಬಿಎಂಟಿಸಿ, ಕಾವೇರಿ ನೀರಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಸೆ. 26ರಂದು ಬೆಂಗಳೂರು ಬಂದ್‍ಗೆ ಕರೆ ನೀಡಿವೆ. ಆದರೆ ಎಂದಿನಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲಾ ಮಾರ್ಗಗಳನ್ನು ಕಾರ್ಯಚರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಬಿಎಂಟಿಸಿ ಹಾಗೂ ಕೆಎಸ್‍ಆರ್ ಟಿಸಿ ನೌಕರರ ಸಂಘದಿಂದ ಬಂದ್ ಗೆ ಬೆಂಬಲ ನೀಡುವುದಾಗಿ ತಿಳಿಸಲಾಗಿತ್ತು. ನಾಳೆ ಬಿಎಂಟಿಸಿ ಬಸ್‍ಗಳನ್ನ ರಸ್ತೆಗೆ ಇಳಿಸಲ್ಲ. ಸರ್ಕಾರಕ್ಕೆ ಬಿಸಿ ಮುಟ್ಟಿಸೋಕೆ ನಾವು ಬೆಂಬಲ ನೀಡ್ತೀವಿ. ನಮ್ಮ ಮೇಲೆ ಶಿಸ್ತು ಕ್ರಮ ಆದ್ರೂ ಪರವಾಗಿಲ್ಲ. ನಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಿದರೂ, ನಾವು ಕೇರ್ ಮಾಡಲ್ಲ. ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ಬಸ್ ಗಳನ್ನು ರೋಡ್‍ಗೆ ಇಳಿಸಲ್ಲ ಎಂದು ಹೇಳಿತ್ತು. ಆದರೆ ಇದೀಗ ಬಿಎಂಟಿಸಿ ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಸ್ಪಷ್ಟಪಡಿಸಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…