ಕನ್ನಡಿಗ ಕೆ.ಎಲ್‌ ರಾಹುಲ್‌ರಿಂದ ಕಾವೇರಿ ಹೋರಾಟಕ್ಕೆ ಬೆಂಬಲ

0
114

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಕಾವೇರಿ ಹೋರಾಟಕ್ಕೆ ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ ಕೆ.ಎಲ್‌ ರಾಹುಲ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ (X) ಖಾತೆಯಲ್ಲಿ ಬರೆದುಕೊಂಡಿರುವ ರಾಹುಲ್‌, ಕಾವೇರಿ ಎಂದೂ ನಮ್ಮದು. ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಕನ್ನಡಿಗರದ್ದು, ಇದು ನಮ್ಮ ದುರಂತ. ಕಾವೇರಿ ಇಡೀ ಕರ್ನಾಟಕದ ಆಸ್ತಿ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಕನ್ನಡಿಗರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here