ಮಸೀದಿ ಆವರಣದೊಳಗೆ ನುಗ್ಗಿ ಜೈ ಶ್ರೀರಾಮ್​ ಘೋಷಣೆ ಕೂಗಿದ್ದ ಇಬ್ಬರ ಬಂಧನ

By: Ommnews

Date:

Share post:

ಕಡಬ ತಾಲೂಕಿನ ಮರ್ಧಾಳ ಬದ್ರಿಯಾ ಜುಮಾ ಮಸೀದಿ ಮಸೀದಿ ಆವರಣದೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ಪರಾರಿಯಾಗಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸ್ ಸಚಿನ್​ ಎನ್ನುವವರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಬೈಕ್​ನಲ್ಲಿ ಆಗಮಿಸಿದ್ದ ಆರೋಪಿಗಳು ಮರ್ಧಾಳದ ಕಾಂಪೌಡ್ ಒಳಗೆ ನುಗ್ಗಿ ಜೈ ಶ್ರೀರಾಮ್​ ಎಂದು ಘೋಷಣೆ ಕೂಗಿದ್ದರು.​ ಬಳಿಕ ಧ್ವನಿ ಕೇಳಿ ಮಸೀದಿಯೊಳಗಿದ್ದ ಮೌಲ್ವಿ ಹೊರಬರುತ್ತಿದ್ದಂತೆಯೇ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಮಸೀದಿ ಆವರಣದಲ್ಲಿ ಬೈಕ್ ಹಿಂತಿರುಗಿಸಿ ತೆರಳಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಆಧಾರದ ಮೇಲೆ ಕಡಬ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement
Advertisement

ಮಸೀದಿ ಮುಖ್ಯಸ್ಥರಿಂದ ದೂರು

ಕಡಬ ತಾಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯು ಕಡಬ- ಮರ್ಧಾಳ ರಸ್ತೆಯ ಮರ್ಧಾಳ ಜಂಕ್ಷನ್​ನಲ್ಲಿ ನಮ್ಮ ಮಸೀದಿಗೆ ಆವರಣ ಗೋಡೆ ಮತ್ತು ಗೇಟ್ ಇರುತ್ತದೆ. ಹೀಗಿರುವಾಗ ಸೆ.24 ರಂದು ರಾತ್ರಿ ಸುಮಾರು 10.50 ರ ಸಮಯಕ್ಕೆ ನಮ್ಮ ಮಸೀದಿಯ ಕಂಪೌಂಡಿನೊಳಗೆ ಯಾರೋ ಅಪರಿಚಿತರು ಬಂದು ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀ ರಾಮ್​ ಘೋಷಣೆ ಕೂಗಿದ್ದು, ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ ಎಂದು ಧರ್ಮಗುರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಮಸೀದಿಗೆ ಭೇಟಿ ನೀಡಿ ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

ಜೈಶ್ರೀರಾಮ್​ ಘೋಷಣೆ ಕೂಗಿದ್ದಾರೆಂದು ಮಸೀದಿ ಮುಖ್ಯಸ್ಥರ ದೂರು ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಪೊಲೀಸರು 2 ತಂಡಗಳನ್ನು ರಚಿಸಿದ್ದರು.

ಜೈಶ್ರೀರಾಮ್​ ಘೋಷಣೆ ಕೂಗಿದ್ದಾರೆಂದು ಮಸೀದಿ ಮುಖ್ಯಸ್ಥರ ದೂರು ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಪೊಲೀಸರು 2 ತಂಡಗಳನ್ನು ರಚಿಸಿದ್ದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section