ಅಂತರಾಷ್ಟ್ರೀಯ

ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದ ವಿದೇಶಿ ಹೂಡಿಕೆಯನ್ನು ಆಕರ್ಷಿಸಬೇಕೆಂಬ ಗುರಿಯೊಂದಿಗೆ ಅಮೆರಿಕ ಕಂಪೆನಿಗಳೊಂದಿಗೆ ಸಚಿವ ಎಂ.ಬಿ ಪಾಟೀಲ್ ಮಾತುಕತೆ

ವಾಷಿಂಗ್ಟನ್: ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದ ವಿದೇಶಿ ಹೂಡಿಕೆಯನ್ನು ಆಕರ್ಷಿಸಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಮೊದಲ ದಿನವಾದ ಸೋಮವಾರದಂದು ಆರ್.ಟಿ.ಎಕ್ಸ್ ಏರೋಸ್ಪೇಸ್ ಕಂಪನಿ, ಇಂಟೆಲ್ ಸ್ಯಾಟ್ ಮತ್ತು ಅಮೆರಿಕ-ಭಾರತ ಎಸ್‍ಎಂಇ ಕೌನ್ಸಿಲ್ ಜತೆ ಮಹತ್ವದ ಮಾತುಕತೆಗಳನ್ನು ನಡೆಸಿದ್ದಾರೆ.

Advertisement
Advertisement
Advertisement

ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ಅಮೆರಿಕದ ಕಂಪನಿಗಳಿಗೆ ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜಧಾನಿಯ ಆಚೆಗೂ ಹೂಡಿಕೆಗೆ ಇರಲು ಉಜ್ವಲ ಅವಕಾಶಗಳು ಮತ್ತು ಅದಕ್ಕೆ ರಾಜ್ಯ ಸರ್ಕರವು ನೀಡುತ್ತಿರುವ ಪ್ರೋತ್ಸಾಹಗಳ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು ಎಂದಿದ್ದಾರೆ.

ಬೆಂಗಳೂರಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಹೊಂದಿರುವ ಆರ್.ಟಿ.ಎಕ್ಸ್ ರಾಜ್ಯದಲ್ಲಿ ಪೂರೈಕೆ ಸರಪಳಿ ಮತ್ತು ವಿದ್ಯುನ್ಮಾನ ಸಾಧನಗಳ ಉತ್ಪಾದನೆಯತ್ತ ಆಸಕ್ತಿ ತೋರಿಸಿದ್ದು, ಈ ಬಗ್ಗೆ ಅದರ ಉನ್ನತ ಮಟ್ಟದ ಪ್ರತಿನಿಧಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಗಿದೆ. ಇದರ ಜತೆಗೆ ಬಾಹ್ಯಾಕಾಶ ನವೋದ್ಯಮಗಳ ಕ್ಷೇತ್ರದಲ್ಲಿ ಸಹಭಾಗಿತ್ವ ಹೊಂದುವ ಕುರಿತು ಚರ್ಚಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇಂಟೆಲ್ ಸ್ಯಾಟ್ ಕಂಪನಿಯೊಂದಿಗೆ ಭಾರತೀಯ ಬಾಹ್ಯಾಕಾಶ ನವೋದ್ಯಮಗಳ ಮೂಲಕ `ಸ್ಯಾಟಲೈಟ್ ಸೋರ್ಸಿಂಗ್’ ಕುರಿತು ಮತ್ತಷ್ಟು ವಿಸ್ತೃತ ಸ್ವರೂಪದಲ್ಲಿ ಕಾರ್ಯ ಚಟುವಟಿಕೆ ವಿಸ್ತರಿಸುವ ಕುರಿತು ಚರ್ಚಿಸಲಾಯಿತು. ಇದಲ್ಲದೆ ಬಾಹ್ಯಾಕಾಶ ಸಂವಹನದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಶೀನ್ ಲರ್ನಿಂಗ್ ಗಳಿಗೆ ಇರುವ ಪಾತ್ರಗಳು ಮತ್ತು ಸಾಫ್ಟ್ ವೇರ್ ಆಧಾರಿತ ಪರಿಹಾರಗಳನ್ನು ಕುರಿತು ಸಹಭಾಗಿತ್ವವನ್ನು ಬೆಳೆಸಿಕೊಳ್ಳಬೇಕಾದ ಅಗತ್ಯವನ್ನು ಮಾತುಕತೆಯ ಸಂದರ್ಭದಲ್ಲಿ ಮನಗಾಣಲಾಯಿತು ಎಂದು ಸಚಿವರು ವಿವರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವರು ಯುಎಸ್-ಇಂಡಿಯಾ ಎಸ್‍ಎಂಇ ಕೌನ್ಸಿಲ್ಲಿನ 30ಕ್ಕೂ ಹೆಚ್ಚಿ ಸಿಇಒಗಳನ್ನು ಭೇಟಿಯಾಗಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ಹೇರಳ ಅವಕಾಶಗಳನ್ನು ಮತ್ತು ಸರ್ಕಾರವು ಉದ್ಯಮಗಳ ಬೆಳವಣಿಗೆಗೆ ರೂಪಿಸಿರುವ ಉಪಕ್ರಮಗಳನ್ನು ಗಮನಕ್ಕೆ ತಂದರು. ಕರ್ನಾಟಕದಲ್ಲಿ ವಾಣಿಜ್ಯ ಮತ್ತು ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ಸಚಿವರು ನೀಡುತ್ತಿರುವ ಮೌಲಿಕ ಕೊಡುಗೆಯನ್ನು ಪರಿಗಣಿಸಿ, ಯುಎಸ್-ಇಂಡಿಯಾ ಎಸ್‍ಎಂಇ ಕೌನ್ಸಿಲ್ ವತಿಯಿಂದ ಅವರಿಗೆ `ಔಟ್ ಸ್ಟ್ಯಾಂಡಿಂಗ್ ಬಿಜಿನೆಸ್ ಪ್ರೊಮೋಷನ್ ಅವಾರ್ಡ್’ ನೀಡಿ ಪುರಸ್ಕರಿಸಲಾಯಿತು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago