ಮಣಿಪುರದಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು

0
99

ಇಂಫಾಲ್: ಅಪಹರಣಕ್ಕೊಳಗಾಗಿದ್ದ ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಬಳಿಕ ಮಣಿಪುರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಮೊಬೈಲ್ ನೆಟ್‍ವರ್ಕ್ ಹಾಗೂ ಇಂಟರ್‌ನೆಟ್ ಸೇವೆಗಳನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಇಬ್ಬರು ವಿದ್ಯಾರ್ಥಿಗಳ ಶವದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರತಿಭಟನೆ ಶುರುವಾಗಿದೆ. ಹತ್ಯೆಯನ್ನು ಖಂಡಿಸಿ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಿದರು. ಬಳಿಕ ಅವರನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27) ರಜೆ ಘೋಷಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ತಪ್ಪು ಮಾಹಿತಿ, ಸುಳ್ಳು ವದಂತಿಗಳು ಮತ್ತು ಇತರ ಹಿಂಸಾತ್ಮಕ ವಿಚಾರಗಳ ಹರಡುವಿಕೆಯನ್ನು ತಡೆಯಲು ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here