ಇಂಫಾಲ್: ಅಪಹರಣಕ್ಕೊಳಗಾಗಿದ್ದ ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಬಳಿಕ ಮಣಿಪುರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಮೊಬೈಲ್ ನೆಟ್‍ವರ್ಕ್ ಹಾಗೂ ಇಂಟರ್‌ನೆಟ್ ಸೇವೆಗಳನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.
ಇಬ್ಬರು ವಿದ್ಯಾರ್ಥಿಗಳ ಶವದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರತಿಭಟನೆ ಶುರುವಾಗಿದೆ. ಹತ್ಯೆಯನ್ನು ಖಂಡಿಸಿ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಿದರು. ಬಳಿಕ ಅವರನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27) ರಜೆ ಘೋಷಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ತಪ್ಪು ಮಾಹಿತಿ, ಸುಳ್ಳು ವದಂತಿಗಳು ಮತ್ತು ಇತರ ಹಿಂಸಾತ್ಮಕ ವಿಚಾರಗಳ ಹರಡುವಿಕೆಯನ್ನು ತಡೆಯಲು ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…