ರಾಜ್ಯ

ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಮಣಿಪುರ ಸರಕಾರ

ಇಂಫಾಲ್ : ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿರುವ ಮಣಿಪುರ ಸರಕಾರವು ಇಡೀ ರಾಜ್ಯವನ್ನು “ಪ್ರಕ್ಷುಬ್ಧ ಪ್ರದೇಶ” ಎಂದು ಬುಧವಾರ ಘೋಷಣೆ ಮಾಡಿದೆ.

Advertisement
Advertisement
Advertisement

ರಾಜ್ಯ ಸರಕಾರದ ಅಧಿಸೂಚನೆಯ ಪ್ರಕಾರ, 19 ನಿರ್ದಿಷ್ಟ ಪೊಲೀಸ್ ಠಾಣೆ ಪ್ರದೇಶಗಳನ್ನು ಹೊರತುಪಡಿಸಿ ಇಡೀ ರಾಜ್ಯವನ್ನು ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಅಡಿಯಲ್ಲಿ “ಪ್ರಕ್ಷುಬ್ಧ ಪ್ರದೇಶ” ಎಂದು ಘೋಷಿಸಲಾಗಿದೆ.

ಇಬ್ಬರು ವಿದ್ಯಾರ್ಥಿಗಳ ಅಪಹರಣ ಮತ್ತು ಹತ್ಯೆಯ ವಿರುದ್ಧ ಇಂಫಾಲ್‌ನಲ್ಲಿ ಮಂಗಳವಾರ ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ‍್ಯಾಲಿಗಳು ನಡೆಡಿದ್ದವು. ವಿದ್ಯಾರ್ಥಿಗಳ ಮೃತದೇಹದ ದೃಶ್ಯಗಳು ಆನ್‌ಲೈನ್‌ನಲ್ಲಿ ಹೊರಹೊಮ್ಮಿದ ನಂತರ ಮಂಗಳವಾರ ಭಾರೀ ಪ್ರತಿಭಟನೆಗಳು ಪ್ರಾರಂಭವಾದವು. ರ‍್ಯಾಪಿಡ್ ಆಕ್ಷನ್ ಫೋರ್ಸ್ ನೊಂದಿಗೆ ಘರ್ಷಣೆ ನಡೆಸಿದ ಪರಿಣಾಮ ಕನಿಷ್ಠ 45 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳಾದ ಫಿಜಾಮ್ ಹೇಮ್ಜಿತ್ (20) ಮತ್ತು ಹಿಜಾಮ್ ಲಿಂತೋಯಿಂಗಂಬಿ (17) ಜುಲೈನಿಂದ ನಾಪತ್ತೆಯಾಗಿದ್ದರು. ಈಗ ಹೊರಬಿದ್ದಿರುವ ಎರಡು ಫೋಟೋಗಳಲ್ಲಿ ವಿದ್ಯಾರ್ಥಿಗಳು ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳೊಂದಿಗೆ ಮತ್ತು ಇನ್ನೊಂದರಲ್ಲಿ ಎರಡು ಮೃತದೇಹಗಳನ್ನು ಹೊಂದಿರುವಂತೆ ತೋರಿಸಲಾಗಿದೆ.

ಹೊಸ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಸರಕಾರ ಮಂಗಳವಾರ ಮರು ಹೇರಿಕೆ ಮಾಡಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago