ಕ್ರೀಡಾ ಸುದ್ದಿ

ಭಾರತಕ್ಕೆ 353 ರನ್‌ಗಳ ಗುರಿ ನೀಡಿದ ಆಸ್ಟ್ರೇಲಿಯಾ

ರಾಜ್‌ಕೋಟ್‌: ಇಲ್ಲಿನ ಸೌರಾಷ್ಟ್ರ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 352 ರನ್‌ ಗಳಿಸಿ ಭಾರತಕ್ಕೆ 353 ರನ್‌ಗಳ ಗುರಿ ನೀಡಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ವೈಟ್‌ವಾಶ್‌ನಿಂದ ತಪ್ಪಿಸಿಕೊಳ್ಳುವ ತವಕದಲ್ಲಿದೆ.

Advertisement
Advertisement
Advertisement

ಟಾಸ್‌ ಗೆದ್ದು ಮೊದಲು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಟೀಂ ಇಂಡಿಯಾ ಬೌಲರ್‌ಗಳನ್ನ ಬೆಂಡೆತ್ತಿದರು. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್‌ ವಾರ್ನರ್‌ ಹಾಗೂ ಮಿಚೆಲ್‌ ಮಾರ್ಷ್‌ ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 78 ರನ್‌ಗಳ ಜೊತೆಯಾಟ ನೀಡಿದರು. 34 ಎಸೆತಗಳಲ್ಲಿ 56 ರನ್‌ (4 ಸಿಕ್ಸರ್‌, 6 ಬೌಂಡರಿ) ಗಳಿಸಿ ಡೇವಿಡ್‌ ವಾರ್ನರ್‌ ಔಟಾಗುತ್ತಿದ್ದಂತೆ, ಮಿಚೆಲ್‌ ಮಾರ್ಷ್‌ ಹಾಗೂ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 2ನೇ ವಿಕೆಟ್‌ಗೆ ಈ ಜೋಡಿ 119 ಎಸೆತಗಳಲ್ಲಿ 137 ರನ್‌ ಬಾರಿಸಿತ್ತು.

ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಮಿಚೆಲ್‌ ಮಾರ್ಷ್‌ ಅಂತಿಮ ಪಂದ್ಯದಲ್ಲಿ ಶತಕ ವಂಚಿತರಾಗಿ ನಿರ್ಗಮಿಸಿದರು. 84 ಎಸೆತಗಳನ್ನು ಎದುರಿಸಿದ ಮಾರ್ಷ್‌ 96 ರನ್‌ (13 ಬೌಂಡರಿ, 3 ಸಿಕ್ಸರ್‌) ಬಾರಿಸಿದ್ರೆ, ಸ್ಟೀವ್‌ ಸ್ಮಿತ್‌ 61 ಎಸೆತಗಳಲ್ಲಿ 74 ರನ್‌ (8 ಬೌಂಡರಿ, 1 ಸಿಕ್ಸರ್‌) ರನ್‌ ಚಚ್ಚಿದರು. 27 ಓವರ್‌ಗಳಲ್ಲಿ ಕೇವಲ 1 ವಿಕೆಟ್‌ ಕಳೆದುಕೊಂಡಿದ್ದ ಆಸೀಸ್‌ ಪಡೆ 400 ರನ್‌ಗಳನ್ನು ಕಲೆಹಾಕುವ ಭರವಸೆ ಮೂಡಿಸಿತ್ತು. ಆದ್ರೆ ಸ್ಟೀವ್‌‌ ಸ್ಮಿತ್‌, ಮಿಚೆಲ್‌ ಮಾರ್ಚ್‌ ವಿಕೆಟ್‌ ಪತನ ಬಳಿಕ ರನ್‌ ವೇಗ ಕೂಡ ಕಡಿಮೆಯಾಯಿತು.

ಅಂತಿಮವಾಗಿ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 352 ರನ್‌ ಗಳಿಸಿತು. ಆಸೀಸ್‌ ಪರ ಮಾರ್ನಸ್‌ ಲಾಬುಶೇನ್‌ 72 ರನ್‌ (9 ಬೌಂಡರಿ, 58 ಎಸೆತ), ಅಲೆಕ್ಸ್‌ ಕ್ಯಾರಿ 11 ರನ್‌, ಗ್ಲೇನ್‌ ಮ್ಯಾಕ್ಸ್‌ವೆಲ್‌ 5 ರನ್‌, ಕ್ಯಾಮರೂನ್‌ ಗ್ರೀನ್‌ 9 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಕೊನೆಯಲ್ಲಿ ಪ್ಯಾಟ್‌ ಕಮ್ಮಿನ್ಸ್‌ 19 ರನ್‌ ಹಾಘೂ ಮಿಚೆಲ್‌ ಸ್ಟಾರ್ಕ್‌ 1 ರನ್‌ ಗಳಿಸಿ ಅಜೇಯರಾಗುಳಿದರು.

ಟೀಂ ಇಂಡಿಯಾ ಪರ ವೇಗಿ ಜಸ್ಪ್ರೀತ್‌ ಬುಮ್ರಾ 3 ವಿಕೆಟ್‌ ಕಿತ್ತರೆ, ಕುಲ್ದೀಪ್‌ ಯಾದವ್‌ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ಪ್ರಸಿದ್ಧ್‌ ಕೃಷ್ಣ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago