ಹ್ಯಾಂಗ್‌ಝೌ: ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದಿದೆ.
ಸರಬ್ಜೋತ್ ಸಿಂಗ್, ಅರ್ಜುನ್ ಸಿಂಗ್ ಚೀಮಾ ಮತ್ತು ಶಿವ ನರ್ವಾಲ್ ತಂಡ 1734 ಅಂಕಗಳಿಸಿ ಮೊದಲ ಸ್ಥಾನ ಪಡೆಯಿತು. ಚೀನಾದ 1733 ಅಂಕ ಪಡೆದರೆ ವಿಯೆಟ್ನಾಂನ 1730 ಅಂಕಗಳಿಸಿತು.
ಭಾರತ 6 ಚಿನ್ನ, 8 ಬೆಳ್ಳಿ, 10 ಕಂಚಿನ ಪದಕವನ್ನು ಗೆಲ್ಲುವುದರೊಂದಿಗೆ ಒಟ್ಟು 24 ಪದಕವನ್ನು ಪಡೆಯುವುದರ ಮೂಲಕ ಪದಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. 80 ಚಿನ್ನದ ಪದಕ ಸೇರಿ ಒಟ್ಟು145 ಪದಕ ಗೆದ್ದಿರುವ ಚೀನಾ ಮೊದಲ ಸ್ಥಾನದಲ್ಲಿದ್ದರೆ 19 ಚಿನ್ನ ಸೇರಿ ಒಟ್ಟು 70 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಎರಡನೇ ಸ್ಥಾನದಲ್ಲಿದೆ.