ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

By: Ommnews

Date:

Share post:

ಹುಬ್ಬಳ್ಳಿ: ಕಾವೇರಿ ಅಷ್ಟೇ ಅಲ್ಲ, ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಈ ವಿಚಾರದಲ್ಲಿ ನಾವೆಲ್ಲ ಒಂದಾಗಿದ್ದೇವೆ. ಒಂದು ವೇಳೆ ಸರ್ಕಾರ ಎಡವಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಶುಕ್ರವಾರದ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement
Advertisement
Advertisement

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ 3,000 ಕ್ಯೂಸೆಕ್ ಆದೇಶ ಬಂದಿದೆ. 10,000 ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ. ಜನ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು ಟ್ರಿಬ್ಯುನಲ್ ಆದೇಶವನ್ನು ಉಲ್ಲಂಘನೆ ಮಾಡಿದೆ.

ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಗಾಗಿ ಎಲ್ಲಿಯವರೆಗೂ ಹೋರಾಟ ಇರುತ್ತೋ ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು.

Share post:

LEAVE A REPLY

Please enter your comment!
Please enter your name here