ಜಿಲ್ಲೆ

ಹುಬ್ಬಳ್ಳಿ: 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಬೆಂಕಿ!

ಹುಬ್ಬಳ್ಳಿ, ಸೆ.28: ಶಿವಾಜಿ ವೃತ್ತದ ಬಳಿ ಮರಾಠಗಲ್ಲಿ ಸಾರ್ವಜನಿಕ ಬೃಹತ್ ಗಣೇಶೋತ್ಸವ ಭಾರೀ ಸಂಭ್ರಮದಿಂದ ನಡೆಯಿತು. ಆದರೆ, ಪಟಾಟಿ ಸಿಡಿಸುವ ವೇಳೆ ಕಿಡಿ ತಗುಲಿ 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಘಟನೆ ಕೂಡ ನಡೆಯಿತು. ಕೂಡಲೇ ಎಚ್ಚೆತ್ತ ಸಮಿತಿ ಸದಸ್ಯರು ಬೆಂಕಿಯನ್ನು ನಂದಿಸಿದ್ದು, ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ.

Advertisement
Advertisement
Advertisement

25 ಅಡಿ ಎತ್ತರದ ಗಣೇಶನನ್ನು ನೋಡಲು ಭಕ್ತ ಸಾಗರವೇ ಹರಿದುಬಂದಿತ್ತು. ಮೆರವಣಿಗೆ ಉದ್ದಕ್ಕೂ ಸಾವಿರಾರು ಜನರು ಸಾಗಿದರು. ಯುವಕರ ತಂಡ ಪಟಾಕಿ ಹಚ್ಚಿ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಆದರೆ, ಪಟಾಕಿ ಹಚ್ಚುವಾಗ ಬೆಂಕಿಯ ಕಿಡಿ ಗಣಪತಿಗೆ ಹೊದಿಸಿದ್ದ ರೇಷ್ಮೆ ಬಟ್ಟೆಗೆ ತಗುಲಿ ಬೆಂಕಿ ಹತ್ತಿಕೊಂಡಿದೆ.

ಇದನ್ನು ಗಮನಿಸಿದ ಸಮಿತಿ ಸದಸ್ಯರು ಕೂಡಲೇ ನೀರು ಹಾಕಿ ಬೆಂಕಿಯನ್ನು ನಂದಿಸಿ ಅನಾಹುತವನ್ನು ತಪ್ಪಿಸಿದರು. ಬಳಿಕ ರೇಷ್ಮೆ ಬಟ್ಟೆ ಬದಲು ಬಿಳಿಬಟ್ಟೆ ತೊಡಿಸಿ ಮೂರ್ತಿಯನ್ನು ಮೆರವಣಿಗೆ‌ ನಡೆಸಿ ವಿಸರ್ಜನೆ ಮಾಡಲಾಯಿತು. ಘಟನೆಯಿಂದಾಗಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago