ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ

0
85

ಮಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಸೇರಿದಂತೆ ರಾಜ್ಯಾದ್ಯಂದ ಶುಕ್ರವಾರ ಬಂದ್ ನಡೆಸುತ್ತಿವೆ. ಆದರೆ ಕರಾವಳಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ಎಲ್ಲಾ ಹೋಟೆಲ್, ಪೆಟ್ರೋಲ್ ಬಂಕ್‌ಗಳು ತೆರೆದಿದ್ದು, ಎಲ್ಲಾ ಉದ್ಯಮಗಳೂ ಎಂದಿನಂತೆ ನಡೆಯುತ್ತಿವೆ. ಕರ್ನಾಟಕ ಬಂದ್ ಇದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರಿ ಕಚೇರಿಗಳು ಕೂಡಾ ಎಂದಿನಂತೆ ನಿರ್ವಹಿಸುತ್ತಿವೆ. ಜನರ ನಿತ್ಯದ ವಹಿವಾಟುಗಳು ಮುಂಜಾನೆಯಿಂದಲೇ ಆರಂಭವಾಗಿವೆ.

LEAVE A REPLY

Please enter your comment!
Please enter your name here