ಪುತ್ತೂರು,ಸೆ 29 : ವಿವಾಹಿತ ಮಹಿಳೆಗೆ ಅರ್ಕೆಸ್ಟ್ರಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡು, ಆಕೆಯ ನಗ್ನ ಚಿತ್ರ ಸೆರೆಹಿಡಿದು ಲಕ್ಷಾಂತರ ರೂ. ಹಣ ನೀಡುವಂತೆ ಬ್ಯ್ಲಾಕ್ ಮೇಲ್ ಮಾಡಿದ ಯುವಕನ ವಿರುದ್ದ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ದ.ಕ. ಜಿಲ್ಲೆಯ ಸುಬ್ರಮಣ್ಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ಪುತ್ತೂರಿನ ಆರ್ಲಪದವು ಮೂಲದ ನಿವಾಸಿ ಪ್ರಶಾಂತ ಭಟ್ ಮಾಣಿಲ (೩೫) ಎಂದು ಗುರುತಿಸಲಾಗಿದೆ.
ಸಂತ್ರಸ್ತ ಮಹಿಳೆಗೆ ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್‌ನಲ್ಲಿ ಹೆಚ್ಚಾಗಿ ಹಾಡು ಕೇಳುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ಹೇಳಿ ಆಸೆ ಹುಟ್ಟಿಸಿದ್ದು, ೨ ವರ್ಷಗಳ ಕಾಲ ಇವರು ಪೋನ್ ಹಾಗೂ ಪೇಸ್ ಬುಕ್ ಮೂಲಕ ಸಂಪರ್ಕದಲ್ಲಿದ್ದರು.
2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಶಿರಸಿ ದೇವಾಲಯದಲ್ಲಿ ಭೇಟಿಯಾಗಿ ಅಲ್ಲಿಂದ ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಇದಾದ ಬಳಿಕ ಆರೋಪಿಯು ಮಹಿಳೆಯ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಮಹಿಳೆಯು ಬೆದರಿಕೆ ಹೆದರಿ 25 ಸಾವಿರ ಹಣ ನೀಡಿದ್ದಾಳೆ. ನಂತರ ಆರೋಪಿಯೂ ಸಂತ್ರಸ್ತ ಮಹಿಳೆಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೇ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದು, ಮತ್ತೆ ಹಣಕ್ಕಾಗಿ ಬ್ಯ್ಲಾಕ್ ಮೇಲ್ ಮಾಡುತ್ತಿರುವ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಕಾರವಾರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…