ಅಂತರಾಷ್ಟ್ರೀಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ನಡೆದ ಭಾರೀ ಸ್ಫೋಟದಲ್ಲಿ 25 ಜನರ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ನಡೆದ ಭಾರೀ ಸ್ಫೋಟದಲ್ಲಿ 25 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Advertisement
Advertisement
Advertisement

ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯ ಮಸೀದಿಯೊಂದರ ಬಳಿ ಭಾರೀ ಸ್ಫೋಟ ಸಂಭವಿಸಿದೆ. ಮಸೀದಿಯ ಬಳಿ ಜನರು ಸೇರಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಫೋಟದಲ್ಲಿ ಮೃತಪಟ್ಟ 25 ಜನರಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಕೂಡಾ ಸೇರಿದ್ದಾರೆ ಎನ್ನಲಾಗಿದೆ.

ಮಸ್ತುಂಗ್‌ನ ಸಹಾಯಕ ಕಮಿಷನರ್ ಅಟ್ಟಾ ಉಲ್ ಮುನಿಮ್ ಮದೀನಾ ಮಸೀದಿ ಬಳಿ ಸಂಭವಿಸಿದ ಸ್ಫೋಟ ತೀವ್ರ ಸ್ವರೂಪದ್ದಾಗಿತ್ತು ಎಂದು ವಿವರಿಸಿದ್ದಾರೆ. ಸ್ಫೋಟದಲ್ಲಿ ಬಲಿಯಾದ ಡಿಎಸ್‌ಪಿಯನ್ನು ನವಾಜ್ ಗಶ್ಕೋರಿ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎನ್ನಲಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago