ರಾಜ್ಯ

ಮೋದಿ ಈ ದೇಶದ ಪ್ರಧಾನಿಯೋ, ಪರದೇಶದ ಪ್ರಧಾನಿಯೋ : ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕರ್ನಾಟಕಕ್ಕೆ ಅನುದಾನ, ಅಕ್ಕಿ ನೀಡದಿರುವ ಕೇಂದ್ರ ಸರ್ಕಾರ ಪರದೇಶಗಳಿಗೆ ಸಹಾಯ ಹಸ್ತ ಚಾಚಿದೆ ಎಂದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಕಿಡಿಕಾರಿದೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಕರ್ನಾಟಕಕ್ಕೆ ಅನುದಾನ ಕೊಡದ ಮೋದಿ ತಾಲಿಬಾನಿಗೆ ಬಜೆಟ್ಟಿನಲ್ಲಿ 200 ಕೋಟಿ ದಯಪಾಲಿಸಿದ್ದಾರೆ. ಕರ್ನಾಟಕಕ್ಕೆ ಅಕ್ಕಿ ಮಾರಾಟ ಮಾಡಲು ನಿರ್ಬಂಧಿಸಿದ ಕೇಂದ್ರ ಸರ್ಕಾರ ಸಿಂಗಾಪುರಕ್ಕೆ ಅಕ್ಕಿ ಕಳಿಸಿಕೊಡಲು ತುದಿಗಾಲಲ್ಲಿ ನಿಂತಿದೆ. ಮೋದಿಯವರು ಕರ್ನಾಟಕ ಪಾಕಿಸ್ತಾನದಲ್ಲಿದೆ ಎಂದು ತಿಳಿದಿದ್ದಾರಾ? ಮೋದಿ ಈ ದೇಶದ ಪ್ರಧಾನಿಯೋ, ಪರದೇಶದ ಪ್ರಧಾನಿಯೋ ಎಂದು ಕಾಂಗ್ರೆಸ್‌ ಖಾರವಾಗಿ ಪ್ರಶ್ನಿಸಿದೆ.

ತಮಿಳುನಾಡಿಗೆ ಕರ್ನಾಟಕ ಸರ್ಕಾರ ನೀರು ಬಿಡುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು (ಶುಕ್ರವಾರ) ಕರ್ನಾಟಕ ಬಂದ್‌ ನಡೆಸಿವೆ. ಈ ವಿಚಾರವಾಗಿಯೂ ರಾಜ್ಯ ಸರ್ಕಾರ, ಬಿಜೆಪಿ ಸಂಸದರ ವಿರುದ್ಧ ಟ್ವೀಟ್‌ ಮಾಡಿ ಕಿಡಿಕಾರಿದೆ.

ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ಬಿಜೆಪಿಯ 25 ಸಂಸದರ ಬಾಯಿ ‘ಪರ್ಮನೆಂಟ್‌ ಬಂದ್‌’ ಆಗಿರುತ್ತದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಎಸಗಿದ ಅನ್ಯಾಯ ಒಂದೆರಡಲ್ಲ. ನೆರೆ ಪರಿಹಾರದಲ್ಲೂ ಅನ್ಯಾಯ, ಬರ ಪರಿಹಾರದಲ್ಲೂ ಅನ್ಯಾಯ, ಜಿಎಸ್‌ಟಿ ಹಂಚಿಕೆಯಲ್ಲೂ ಅನ್ಯಾಯ, ಕೇಂದ್ರದ ಯೋಜನೆಗಳ ಅನುದಾನದಲ್ಲೂ ಅನ್ಯಾಯ, ಈಗ ಕಾವೇರಿ ವಿಚಾರದಲ್ಲೂ ಅನ್ಯಾಯ. ಈ ಎಲ್ಲಾ ಅನ್ಯಾಯಕ್ಕೂ ಕರ್ನಾಟಕದ ಬಿಜೆಪಿ ಸಂಸದರದ್ದು ‘ಮೌನ’ ಮಾತ್ರ. ಕರ್ನಾಟಕ ಇರುವುದು ಚುನಾವಣಾ ರೋಡ್‌ ಶೋ ಮಾಡಲು ಮಾತ್ರ ಎಂದು ತಿಳಿದಿದ್ದಾರಾ ಮೋದಿಯವರು ಎಂದು ಕಾಂಗ್ರೆಸ್‌ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿ ಪ್ರಶ್ನಿಸಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago