ಬೆಂಗಳೂರು: ಈ ಬಾರಿಯ ಬೆಂಗಳೂರು ವಿಶ್ವವಿದ್ಯಾಲಯ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭಾಜನರಾಗಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯ ತನ್ನ 58ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಮುಂದೆ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ.
ಜೆಡಿಎಸ್‌ನ ಕಟ್ಟಾಳು ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಇಳಿ ವಯಸ್ಸಿನಲ್ಲೂ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಇಂದಿಗೂ ಕನ್ನಡಿಗರ ಪರ ಸಂಸತ್ತಿನಲ್ಲಿ ಧ್ವನಿ ಎತ್ತುತ್ತಿದ್ದಾರೆ. ಇನ್ನು ಕರ್ನಾಟಕ ಕಂಡ ಏಕೈಕ ಪ್ರಧಾನಿ ಎಂಬ ಹೆಗ್ಗಳಿಕೆಯೂ ಇವರಿಗಿದೆ.