ಬೆಳಗಾವಿ ಸೆ.30: ಇತ್ತೀಚಿಗೆ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಅನಾಮಿಕನಿಂದ ಜೀವ ಬೆದರಿಕೆ ಪತ್ರ ಬಂದಿತ್ತು. ಇದೀಗ ಸೆ.20 ಮತ್ತೊಂದು ಜೀವ ಬೆದರಿಕೆ ಪತ್ರ ಸ್ವಾಮೀಜಿಗೆ ಬಂದಿದ್ದು, ಪತ್ರದಲ್ಲಿ ಸ್ವಾಮೀಜಿ ಸೇರಿದಂತೆ ರಾಜ್ಯದ ಮೂವರು ಸಚಿವರ ಹೆಸರನ್ನು ಉಲ್ಲೇಖಿಸಲಾಗಿದೆ. ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ , ಪ್ರೀಯಾಂಕ್ ಖರ್ಗೆ ಅವರ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಅನಾಮಿಕ ಬರೆದ ಪತ್ರದಲ್ಲಿ ಏನಿದೆ?
“ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ. ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದೆ.
“ಎಸ್.ಜಿ ಸಿದ್ದರಾಮಯ್ಯ, ಕೆ.ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೋ.ಭಗವಾನ್,ಪ್ರೋ.ಮಹೇಶ್ ಚಂದ್ರ, ಬಿಟಿ ಲಲಿತಾನಾಯಕ್, ನಟ ಚೇತನ್, ನಟ ಪ್ರಕಾಶರಾಜ್. ಸಚಿವರಾದ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಹಾಗೂ ಧ್ವಾರಕಾನಾಥ, ದೇವನೂರು ಮಹದೇಪ್ಪ, ಬಿ.ಎಲ್ ವೇಣು, ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ ಎಂದು ಸವಾಲು ಹಾಕಿದ್ದಾನೆ.”
“ಮತಾಂಧ ಮುಸ್ಲಿಂಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಮಾಡ್ತೊರೋದು ತಪ್ಪು ಎಂದು ಹೇಳುವ ತಾಕತ್ತು ನಿಮ್ಮಲ್ಲಿದಿಯೇ? ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡ್ತಿರೋದು ತಪ್ಪು ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ? ದೈರ್ಯವಿದ್ದರೆ ಹೇಳಿ ಇಲ್ಲವಾದರೆ ನಿಮ್ಮ ಕೊನೆಯ ದಿನಗಳನ್ನು ಎಣಿಸಿ” ಎಂದು ಬೆದರಿಕೆ ಹಾಕಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…