ಗದಗ, ಸೆ. 30: ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಜನಸಾಗರ ತಮ್ಮ ಅಹವಾಲುಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸಿದರು. ಸಚಿವ ಎಚ್.ಕೆ.ಪಾಟೀಲ ಅವರು ಸಂಯಮದಿಂದಲೇ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸಾಧ್ಯವಾದಷ್ಟು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿ ಬಾಕಿ ಸಮಸ್ಯೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಗಡುವನ್ನು ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಿಸಲು ಸೂಚನೆ ನೀಡಿದರು.
ಸಚಿವ ಎಚ್.ಕೆ.ಪಾಟೀಲ ಅವರು ಆಶ್ರಯಮನೆ, ಜಲಜೀವನ ಮಿಷನ, ಪಹಣಿ ತಿದ್ದುಪಡಿ, ವ್ಯಾಸಂಗ, ಉಚಿತ ಲ್ಯಾಪಟಾಪ್, ಆರೋಗ್ಯ ಸಂಬಂಧಿತ ಕಾಯಿಲೆಗಳಿಗೆ ಹೆಚ್ಚಿನ ಚಿಕಿತ್ಸೆಗೆ ನೆರವು ಕೋರಿ ಕುರಿತಂತೆ ಸಾರ್ವಜನಿಕರ ಹಲವಾರು ಸಮಸ್ಯೆಗಳನ್ನು ಶಾಂತಚಿತ್ತದಿಂದಲೇ ಆಲಿಸಿ ಪರಿಹಾರ ಸೂಚಿಸಿದರು.