154ನೇ ಗಾಂಧಿ ಜಯಂತಿಯ ಅಂಗವಾಗಿ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

0
118

ಪ್ರಧಾನಿ ನರೇಂದ್ರ ಮೋದಿ ಅವರು 154ನೇ ಗಾಂಧಿ ಜಯಂತಿಯ ಅಂಗವಾಗಿ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಗಾಂಧಿಯವರ ಮಾತುಗಳು ಹಾಗೂ ಆಲೋಚನೆಗಳು ಜಾಗತಿಕ ಮತ್ತು ಇಡೀ ಮಾನವಕುಲವನ್ನು ಏಕತೆ ಹಾಗೂ ಸಹಾನುಭೂತಿಯೆಡೆಗೆ ಪ್ರೇರೇಪಿಸುತ್ತದೆ ಎಂದು ಮೋದಿ ಹೇಳಿದ್ದಾರೆ. ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಹಾದಿಯನ್ನು ಬೆಳಗಿಸುತ್ತಲೇ ಇರುತ್ತವೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ, ಎಲ್ಲರೂ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳಲಿ ಎಂದು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಮಹಾತ್ಮ ಗಾಂಧಿಯವರ ಅಹಿಂಸೆ ಮತ್ತು ಸಹಿಷ್ಣುತೆಯ ಮೌಲ್ಯಗಳನ್ನು ಗೌರವಿಸಲು ಈ ದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here