ಬೀದರ್​​ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

By: Ommnews

Date:

Share post:

ಬೀದರ್, ಅ. 03: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಅ.03) ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.

Advertisement
Advertisement
Advertisement

ಛತ್ತೀಸ್​ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್​ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್ ಗೆ ತೆರಳಲಿದ್ದಾರೆ. ಹಾಗೇ ಸಂಜೆ 5:55ಕ್ಕೆ ನಿಜಾಮಾಬಾದ್ ನಿಂದ ವಾಪಸ್​ ಬೀದರ್ ಏರ್ ಬೇಸ್​ಗೆ ಬಂದು 6 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section