ಬೆಂಗಳೂರು, ಅ. 4: ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಹಾಸನದಿಂದ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ವೈದ್ಯರು ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಹಿಂದೆ ಬೆಂಗಳೂರಿನಲ್ಲಿದ್ದ ಸಾಲು ಮರದ ತಿಮ್ಮಕ್ಕ ಅವರು ಇತ್ತೀಚಿಗೆ ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನಲ್ಲಿ ವಾಸಾಗಿದ್ದರು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಸ್ಥಳೀಯ ಚಿಕಿತ್ಸೆಗಳಿಂದ ಗುಣಮುಖರಾಗದ ಕಾರಣ ಉಸಿರಾಟ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಅವರನ್ನು ಬಳ್ಳೂರಿನಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸದ್ಯ ವಾತಾವರಣದಲ್ಲಿ ಬದಲಾವಣೆಯಿಂದ ಎಲ್ಲೆಡೆ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಲು ಮರದ ತಿಮ್ಮಕ್ಕ ಅವರಿಗೂ ಇದೇ ಕಾರಣಕ್ಕೆ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದ್ದು, ವೈದ್ಯರು ಆಸ್ಪತ್ರೆಯಲ್ಲಿ ಇನ್ನಷ್ಟು ದಿನ ನಿಗಾವಹಿಸಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಕಳೆದ ವಾರ ತಿಮ್ಮಕ್ಕ ಅವರಿಗೆ ಮೈ ಕೈ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇನ್ನು ಎರಡು ತಿಂಗಳ ಹಿಂದೆ ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಬಳಿಕ ಜಯನಗರ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…