ನಟ ರಣಬೀರ್ ಕಪೂರ್ ಗೆ ‘ಇಡಿ’ ಶಾಕ್: ವಿಚಾರಣೆಗಾಗಿ ನೋಟಿಸ್

0
102

ಬಾಲಿವುಡ್ ಖ್ಯಾತ ನಟ ರಣಬೀರ್ ಕಪೂರ್ ಗೆ ಇಡಿ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 8ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ನಿಜಕ್ಕೂ ಬಾಲಿವುಡ್ ಗೆ ಇದೊಂದು ಶಾಕಿಂಗ್ ನ್ಯೂಸ್ ಕೂಡ ಆಗಿದೆ.

ಉದ್ಯಮಿ ಸೌರಬ್ ಚಂದ್ರಶೇಖರ್ ಅವರ ದುಬಾರಿ ಮದುವೆ ಪಾರ್ಟಿಯಲ್ಲಿ ಹಲವು ಸಿಲೆಬ್ರಿಟಿಗಳು ಭಾಗಿಯಾಗಿದ್ದರು. ಈ ಮದುವೆಯ ಪಾರ್ಟಿಯಲ್ಲಿ ಭಾಗಿಯಾಗುವುದಕ್ಕಾಗಿಯೇ ಹಣ ಪಡೆದಿದ್ದರು. ಇವರಿಗೆಲ್ಲ ನೀಡಿದ ಹಣವು ಮಹದೇವ ಬೆಟ್ಟಿಂಗ್ ಆಪ್ ನಿಂದ ಬಂದಿದ್ದಾಗಿದೆ. ಈ ಆಪ್ ನಲ್ಲಿ ಹವಾಲ ಹಣ ಹೂಡಿಕೆ ಮಾಡಲಾಗಿದೆ ಎನ್ನುವ ಆರೋಪವೂ ಕೇಳಿ ಬಂದಿದೆ. ಹಾಗಾಗಿ ಹಣ ಪಡೆದವರಿಗೆ ನೋಟಿಸ್ ನೀಡಿ ವಿಚಾರಣೆ ಕರೆಯಲಾಗುತ್ತಿದೆ.

ಬಾಲಿವುಡ್ ನ ಅನೇಕ ನಟ ನಟಿಯರು ಈ ಆಪ್ ನಲ್ಲಿ ಪರೋಕ್ಷವಾಗಿ ಹಣ ಹೂಡಿದ್ದಾರೆ ಎನ್ನುವ ಮಾಹಿತಿಯೂ ಇದೆ. ಕೆಲವರು ಇದರ ಜಾಹೀರಾತಿನಲ್ಲೂ ಭಾಗಿಯಾಗಿದ್ದಾರೆ. ಅಲ್ಲದೇ, ಆಪ್ ಪ್ರಚಾರದಲ್ಲೂ ತೊಡಗಿಕೊಂಡಿದ್ದಾರೆ. ಈ ಆಪ್ ಜೊತೆ ಗುರುತಿಸಿಕೊಂಡ ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ರಣಬೀರ್ ಕಪೂರ್ ಜೊತೆ ಇನ್ನೂ ಒಂಬತ್ತು ಜನ ಸೆಲೆಬ್ರೆಟಿಗಳಿಗೂ ನೋಟಿಸ್ ನೀಡಲಾಗಿದೆ.

LEAVE A REPLY

Please enter your comment!
Please enter your name here