ಲೈಕಾ ಸಂಸ್ಥೆಯು ರಜನಿಕಾಂತ್ ಅವರ ಫಸ್ಟ್ ಲುಕ್ ಅನ್ನು ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಡಬಲ್ ಸಂಭ್ರಮ ತಂದಿದೆ. ತಲೈವಾ ಫಸ್ಟ್ ಲುಕ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.
ಬರೋಬ್ಬರಿ 32 ವರ್ಷಗಳ ಬಳಿಕ ಭಾರತೀಯ ಸಿನಿಮಾ ರಂಗದ ಇಬ್ಬರು ದಿಗ್ಗಜರು ಒಂದಾಗಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಇದು ನಿಜನಾ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಅದು ನಿಜವಾಗಿದೆ ಮೂರು ದಶಕದ ಬಳಿಕ ರಜನಿಕಾಂತ್ ಮತ್ತು ಅಮಿತಾಭ್ ಬಚ್ಚನ್ ಒಟ್ಟಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ, ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಭ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.
ಇದೀಗ 32 ವರ್ಷದ ಬಳಿಕ ರಜನಿ- ಅಮಿತಾಭ್ ಬಚ್ಚನ್ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ.ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.
ರಜನಿ-ಅಮಿತಾಭ್ ಬಚ್ಚನ್ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ- ಅಮಿತಾಭ್ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.