ವಿಟ್ಲ, ಅ. 4 : ಚಾಲಕನ ನಿಯಂತ್ರಣ ತಪ್ಪಿ ಗ್ರಾನೈಟ್ ಲಾರಿ ಪಲ್ಟಿಯಾಗಿ ಗಂಭೀರ ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಸುಭಾಶ್ವಂದ್ರ ಎನ್ನಲಾಗಿದ್ದು, ಹರ್ಷದ್ ಮತ್ತು ಪವನ್ ಹಾಗೂ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೂವರಿಗೆ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಗಾಯಗೊಂಡ ನಾಲ್ವರಲ್ಲಿ ಇಬ್ಬರು ಉತ್ತರ ಭಾರತದ ಮೂಲದವರು ಮತ್ತು ಇಬ್ಬರು ಮಂಗಳೂರಿನವರು ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.