ಹಾಂಗ್ ಝೌ: ಏಷ್ಯನ್ ಗೇಮ್ಸ್ 2023ರ ಜಾವೆಲಿನ್ ಎಸೆತದಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಮತ್ತು ಕಿಶೋರ್ ಜೇನಾ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಈ ಮೂಲಕ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತೀಯ ಸ್ಪರ್ಧಿಗಳು ಉನ್ನತ ಸಾಧನೆ ಮಾಡಿದ್ದಾರೆ.
ನೀರಜ್ ಅವರು, 88.88 ಮೀಟರ್ ದೂರ ಜಾವೆಲಿನ್ ಎಸೆದು ಅಮೋಘ ಸಾಧನೆಗೈದಿದ್ದಾರೆ. ನೀರಜ್‍ಗೆ ತಕ್ಕ ಪೈಪೋಟಿ ನೀಡಿದ ಜೇನಾ 87.54 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.