ದಸರಾದಲ್ಲಿ ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರಕ್ಕೆ ಆದ್ಯತೆ

By: Ommnews

Date:

Share post:

ಮೈಸೂರು, ಅ. 4 : ದಸರಾ ಜಂಬೂಸವಾರಿಯಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ ಅರ್ಥಪೂರ್ಣ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.

Advertisement
Advertisement
Advertisement

ಜಿಲ್ಲಾ ಪಂಚಾಯತ್ ಸಭಾಂಗದಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ಸಿದ್ಧತೆ ಸಂಬಂಧ ವಿವಿಧ ಜಿಲ್ಲೆಗಳ ನೋಡೆಲ್ ಅಧಿಕಾರಿಗಳು ಹಾಗೂ ಕಲಾವಿದರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಸಮಾಜದ ಪರಿವರ್ತನೆಗೆ ಅನುಕೂಲವಾಗುವಂಥ ಪರಿಕಲ್ಪನೆ ಅಡಿಯಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.

ಪ್ರತಿ ಜಿಲ್ಲೆಗೆ ಅದರದೇ ಆದ ಐತಿಹಾಸಿಕ ಘಟನೆಗಳು ಇರುತ್ತವೆ. ವಿಭಿನ್ನ ಆಚಾರ, ವಿಚಾರಗಳು, ಕಲೆ, ಸಂಸ್ಕೃತಿಗಳನ್ನು ಒಳಗೊಂಡಿರುತ್ತವೆ. ಐತಿಹಾಸಿಕ ಮಾಹಿತಿ ಜತೆಗೆ ಜೀವಂತವಾಗಿ ನಡೆದಿರುವಂತೆ ಘಟನೆಗಳನ್ನು ಬಿಂಬಿಸುವ ಶಿಸ್ತುಬದ್ಧ ಎಲ್ಲರ ಕಣ್ಮನ ಸೆಳೆಯುವ ಕಲಾಕೃತಿ ಒಳಗೊಂಡಿರಲಿ ಎಂದು ತಿಳಿಸಿದರು.

ಕಲಾವಿದರು ಸಂಪೂರ್ಣವಾಗಿ ತೊಡಗಿಸಿಕೊಂಡು ಸೃಜನಶೀಲತೆಯಿಂದ ಉತ್ತಮವಾದ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ. ನಿಮಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಪ್ರಶಸ್ತಿ ಪತ್ರವನ್ನು ವಿಭಾಗೀಯ ಮಟ್ಟದಲ್ಲಿ ಹಾಗೂ ಕಲಾವಿದರಿಗೂ ಪ್ರತ್ಯೇಕ ಪ್ರಶಸ್ತಿ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಸ್ತಬ್ಧಚಿತ್ರದ ಜೊತೆಗೆ ಆಯಾ ಜಿಲ್ಲೆಯ ಕಲಾತಂಡಗಳನ್ನು ನಿಯೋಜಿಸುವುದು. ಅಕ್ಕಪಕ್ಕದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಇರಬೇಕು. ಅನವಶ್ಯಕವಾಗಿ ಯಾರಿಗೂ ಅವಕಾಶ ನೀಡಬಾರದು. ಸ್ತಬ್ಧಚಿತ್ರದ ಅಳತೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಾಸ ಇರಬಾರದು. ಅಗಲ, ಎತ್ತರ, ಉದ್ದ ಜಿಲ್ಲಾಡಳಿತ ನಿಗದಿಪಡಿಸಿದ ಅಳತೆಯನ್ನು ಮೀರಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section