ಉಡುಪಿ, ಅ.5: ಅ.15ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾವನ್ನು ಆಚರಿಸಲು ಮುಂದಾಗಿದ್ದು ಈ ಬಗ್ಗೆ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್ ಕೋಟ್ಯಾನ್ ಮಾಹಿತಿ ನೀಡಿದ್ದಾರೆ.
ಈ ಹಿಂದೆ ಮೈಸೂರಿನಲ್ಲಿ ಆಚರಿಸಲಾಗುತ್ತಿದ್ದ ಮಹಿಷ ದಸರಾವನ್ನು ಅಕ್ಟೋಬರ್ 15 ರಂದು ನವರಾತ್ರಿ ಆರಂಭವಾದಾಗ ಉಡುಪಿಯಲ್ಲಿ ಆಚರಿಸಲು ಅಂಬೇಡ್ಕರ್ ಯುವ ಸೇನೆ ಮುಂದಾಗಿದೆ. ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್ ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ದ್ರಾವಿಡ ದೊರೆ ಮಹಿಷಾಸುರನ ಬಗ್ಗೆ ಜನತೆಗೆ ಅರಿವು ಮೂಡಿಸುವ ಉದ್ದೇಶದಿಂದ ಅ.15ರಂದು ಉಡುಪಿಯಲ್ಲಿ ಮಹಿಷಾ ದಸರಾ ಮತ್ತು ಮೂಲ ನಿವಾಸಿಗಳ ಸಾಂಸತಿಕ ಹಬ್ಬ ಆಚರಿಸುವುದಾಗಿ ಮಾಹಿತಿ ನೀಡಿದರು.
ಅ.15ರಂದು ಬೆಳಗ್ಗೆ 10.30ಕ್ಕೆ ಅಜ್ಜರಕಾಡು ಹುತಾತ್ಮ ಸ್ಮಾರಕದಿಂದ ವಿವಿಧ ವಾಹನ ಜಾಥಾದೊಂದಿಗೆ ಮಹಿಷ ಟ್ಯಾಬ್ಲೋ ಮೆರವಣಿಗೆ ಹೊರಟು ಜೋಡು ಮಾರ್ಗವಾಗಿ ಬನ್ನಂಜೆ ಮೂಲಕ ಕರಾವಳಿ ಬೈಪಾಸ್ನಿಂದ ಆದಿ ಉಡುಪಿ ಜಿಲ್ಲಾ ಅಂಬೇಡ್ಕರ್ ಭವನ ತಲುಪಲಿದೆ. ಕಲಬುರಗಿಯ ಸಂಶೋಧನಾ ಬರಹಗಾರ ಡಾ. ವಿಠಲ ವಗ್ಗನ್ ಮಹಿಷಾಸುರ ಯಾರು ಎಂಬ ವಿಚಾರ ಸಂಕಿರಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಗತಿಪರ ಚಿಂತಕ ಶ್ರೀರಾಮ ದಿವಾಣ, ದಲಿತ ಚಿಂತಕ ನಾರಾಯಣ ಮಾಣೂರು ಭಾಗವಹಿಸಲಿದ್ದಾರೆ ಎಂದು ಹರೀಶ್ ತಿಳಿಸಿದರು.
ಇನ್ನು ಕೆಲ ಮೇಲ್ವರ್ಗದವರು ಮಹಿಷನನ್ನು ರಾಕ್ಷಸ ಎಂದು ಕೆಟ್ಟದಾಗಿ ಬಿಂಬಿಸುತ್ತಿದ್ದಾರೆ. ಆದರೆ ಮಹಿಷ ಒಬ್ಬ ಐತಿಹಾಸಿಕ ಚಕ್ರವರ್ತಿಯಾಗಿದ್ದನು. ಆದ್ದರಿಂದ ಮಹಿಷ ದಸರಾವು ಸ್ಥಳೀಯ ಜನರ ಸಾಂಸ್ಕೃತಿಕ ಅಂಶಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಮಹಿಷ ಸಾಮ್ರಾಜ್ಯದ ಆಡಳಿತಗಾರನ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಉದ್ದೇಶ ನಮ್ಮದು. ಮಹಿಷಾಸುರ ಪರಂಪರೆಯನ್ನು ಸಾಕಾರಗೊಳಿಸಲು ಹಾಗೂ ವೈದಿಕ ಸಂಸ್ಕೃತಿಗೆ ಪರ್ಯಾಯ ಸಂಸ್ಕೃತಿಯನ್ನು ರೂಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹರೀಶ್ ತಿಳಿಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…