ಕರಾವಳಿ

ಅಕ್ಟೋಬರ್ 15ರಿಂದ 34ನೇ ವರ್ಷದ ಐತಿಹಾಸಿಕ “ಮಂಗಳೂರು ದಸರಾ” ಪ್ರಾರಂಭ

ಮಂಗಳೂರು, ಅ. 5 : ಐತಿಹಾಸಿಕ 34 ನೇ ವರ್ಷದ ಮಂಗಳೂರು ದಸರಾ ಅಕ್ಟೋಬರ್ 15ರಿಂದ ಶ್ರೀ ಕ್ಷೇತ್ರ ಕುದ್ರೊಳಿಯಲ್ಲಿ ಪ್ರಾರಂಭವಾಗುತ್ತಿದ್ದು ಸಿದ್ದತೆಗಳು ಭರದಿಂದ ಸಾಗಿವೆ.

Advertisement
Advertisement
Advertisement

ಈ ಬಾರಿಯ ದಸರಾ ಸಿದ್ದತೆಗಳ ಬಗ್ಗೆ ದೇವಳದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ವರ್ಷಂಪ್ರತಿ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ “ಮಂಗಳೂರು ದಸರಾ” ಶ್ರೀ ಕ್ಷೇತ್ರದ ನವೀಕರಣದ ರುವಾರಿ ಬಿ. ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಇದೇ ತಿಂಗಳ ಅ.15ರಂದು ಶ್ರೀ ಗಣೇಶ, ನವದುರ್ಗೆ ಮತ್ತು ಶ್ರೀ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೊಳಿಸಿ ಪ್ರಾರಂಭವಾಗಲಿದೆ” ಎಂದರು.

ಬಳಿಕ ಮಾತಾಡಿದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು, “ದಸರಾ ಮಹೋತ್ಸವವು ಅ.25ರವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದ್ದು,ಅ. 24ರಂದು 4 ಗಂಟೆಗೆ ಸರಿಯಾಗಿ “ಮಂಗಳೂರು ದಸರಾ” ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜರಸ್ತೆಯಲ್ಲಿ ಸಾಗಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.

ಅ.15ರಿಂದ ಅಕ್ಟೋಬರ 23ರವರೆಗೆ ದಿನಂಪ್ರತಿ ಸಂಜೆ 6.00 ರಿಂದ ರಾತ್ರಿ 9.00 ಗಂಟೆಯವರೆಗೆ ಪ್ರಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.

ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವಾರು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಟ್ಯಾಬ್ಲೋಗಳು ಭಾಗವಹಿಸಲಿದ್ದು ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ.

ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲಕರು ತಮ್ಮ ತಮ್ಮ ಕಟ್ಟಡಗಳನ್ನುವಿದ್ಯುದ್ದೀಪದಿಂದ ಅಲಂಕರಿಸಿ, “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಹರಿಕೃಷ್ಣ ಬಂಟ್ವಾಳ್, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನುಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago