ರಾಜ್ಯ

ಸ್ಟ್ಯಾನ್‌ಫೋರ್ಡ್ ವಿಜ್ಞಾನಿಗಳ ಪಟ್ಟಿ: ಕುವೆಂಪು ವಿ.ವಿಯ ಇಬ್ಬರಿಗೆ ಸ್ಥಾನ

ಭದ್ರಾವತಿ, ಅ.5 : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಶೇ. 2ರಷ್ಟು ಅತ್ಯುತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಬಿ.ಜೆ.ಗಿರೀಶ್ ಮತ್ತು ಬಿ.ಇ.ಕುಮಾರಸ್ವಾಮಿ ಸತತ ಮೂರನೇ ವರ್ಷ ಸ್ಥಾನ ಪಡೆದಿದ್ದಾರೆ.

Advertisement
Advertisement
Advertisement

ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜಾನ್ ಅಯೋನ್ನಿಡಿಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಇವರು ಸ್ಥಾನ ಪಡೆದಿದ್ದು, ಇಬ್ಬರ ವಿವರ ಅಂತರ್ಜಾಲದಲ್ಲಿ ಲಭ್ಯವಿದೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹ ಲೇಖನಗಳು, ಎಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಗತ್ತಿನ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶ ಪ್ರಕಟಿಸಲಾಗುತ್ತದೆ. ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡುವ ಸಂಪ್ರದಾಯ ಶುರುವಾಗಿದ್ದು 2018ರಲ್ಲಿ.

ಸಾಧಕರ ಪಟ್ಟಿಯಲ್ಲಿ 40,686ನೇ ಸ್ಥಾನ ಪಡೆದಿರುವ ವಿಶ್ವವಿದ್ಯಾಲಯದ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಬಿ.ಜೆ. ಗಿರೀಶ್ ಎಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಷಯಗಳ ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.

ಔದ್ಯೋಗಿಕ ರಸಾಯನ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಬಿ.ಇ. ಕುಮಾರಸ್ವಾಮಿ 1,79,264ನೇ ಸ್ಥಾನದಲ್ಲಿದ್ದು, ಸತತ ಮೂರನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಎಸ್.ವೆಂಕಟೇಶ್ ತಿಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago