ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡ, ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.
ಭಾರತದ ಪರ ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ಅಭಿಷೇಕ್ ಮತ್ತು ರೋಹಿದಾಸ್ ಅಮಿತ್ ಗೋಲು ಗಳಿಸುವ ಮೂಲಕ ಜಪಾನ್ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಲ್ಲದೆ ಈ ಗೆಲುವಿನೊಂದಿಗೆ ಭಾರತ ಹಾಕಿ ತಂಡ 2024ರಲ್ಲಿ ನಡೆಯಲ್ಲಿರುವ ಪ್ಯಾರಿಷ್ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಸಹ ಖಚಿತಪಡಿಸಿಕೊಂಡಿದೆ.