ಜೆರುಸಲೇಂ: ಪ್ಯಾಲೆಸ್ತೇನ್ನ ಗಾಜಾ ಪಟ್ಟಿಯ ಕಡೆಯಿಂದ ಇಸ್ರೇಲ್ ಮೇಲೆ 5000 ರಾಕೆಟ್ಗಳ ದಾಳಿ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ಯುದ್ಧವನ್ನೇ ಘೋಷಣೆ ಮಾಡಿದೆ. ಇಂದು ಬೆಳಗ್ಗೆಯಿಂದಲೇ ಇಸ್ರೇಲ್ ಮೇಲೆ ರಾಕೆಟ್ ದಾಳಿ ಆರಂಭವಾಗಿದ್ದು, ದಿಗ್ಭಂಧನಕ್ಕೊಳಗಾಗಿರುವ ಗಾಜಾ ಪಟ್ಟಿಯ ಹಲವಾರು ಕಡೆಗಳಿಂದ ರಾಕೆಟ್ ಉಡಾಯಿಸಲಾಗಿದೆ ಎನ್ನಲಾಗಿದೆ. ಹಮಾಸ್ ಉಗ್ರಗಾಮಿಗಳು ಇದನ್ನು “ಮೊದಲ ದಾಳಿ” ಎಂದು ಕರೆದಿದ್ದಾರೆ. ಇಸ್ರೇಲ್ ರಕ್ಷಣಾ ಪಡೆ ಯುದ್ಧದ ಸ್ಥಿತಿಯನ್ನು ಘೋಷಿಸಿದ್ದರಿಂದ ಒಬ್ಬರು ಸಾವನ್ನಪ್ಪಿದ್ದಾರೆ, ಮೂವರು ಗಾಯಗೊಂಡಿದ್ದಾರೆ.
‘ಆಪರೇಷನ್ ಅಲ್-ಅಕ್ಸಾ ಫ್ಲಡ್’ ಆರಂಭವಾದಾಗ 5,000 ರಾಕೆಟ್‌ಗಳನ್ನು ಹಾರಿಸಲಾಯಿತು ಎಂದು ಹಮಾಸ್ ಸಶಸ್ತ್ರ ವಿಭಾಗ ಹೇಳಿದೆ. ಇಸ್ರೇಲ್ ಡಿಫೆನ್ಸ್ ಫೋರ್ಸ್ (ಐಡಿಎಫ್) ಯೋಧನನ್ನು ಅಪಹರಿಸಲಾಗಿದೆ. ದಕ್ಷಿಣ ಇಸ್ರೇಲ್‌ನಲ್ಲಿ ಒತ್ತೆಯಾಳಾಗಿಟ್ಟುಕೊಂಡ ಸನ್ನಿವೇಶಗಳು ಕೂಡ ವರದಿಯಾಗಿವೆ.
ಇಸ್ರೇಲ್‌ನಲ್ಲಿ ಭಯೋತ್ಪಾದಕರೆಂದು ಪರಿಗಣಿಸಲ್ಪಟ್ಟಿರುವ ಹಮಾಸ್ ಉಗ್ರಗಾಮಿಗಳ ಒಳನುಸುಳುವಿಕೆಯ ಬಗ್ಗೆ ದೇಶದ ರಕ್ಷಣಾ ಪಡೆಗಳು ಎಚ್ಚರಿಕೆ ನೀಡಿವೆ. ಈ ದಾಳಿಯಲ್ಲಿ ಪ್ಯಾರಾಗ್ಲೈಡರ್‌ಗಳನ್ನು ಬಳಸಲಾಗಿದ್ದು, ಇಸ್ರೇಲ್ ಆ ದೃಶ್ಯದ ತುಣುಕುಗಳನ್ನು ಬಿಡುಗಡೆ ಮಾಡಿದೆ.
ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನಂತರ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ 2ನೇ ದೊಡ್ಡ ಯುದ್ಧ ಇದಾಗಿದೆ.ಗಾಜಾ ಪಟ್ಟಿಯಿಂದ ಹಲವಾರು ಭಯೋತ್ಪಾದಕರು ಇಸ್ರೇಲ್ ಪ್ರದೇಶದೊಳಗೆ ನುಸುಳಿದ್ದಾರೆ. ಗಾಜಾ ಪಟ್ಟಿಯ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಿಗೆ ತಮ್ಮ ಮನೆಗಳಲ್ಲಿಯೇ ಉಳಿಯಲು ಸೂಚಿಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆಗಳು ಮಾಹಿತಿ ನೀಡಿವೆ.
ಪವಿತ್ರ ನಗರವಾದ ಜೆರುಸಲೇಮ್ ಮತ್ತು ಇಸ್ರೇಲ್‌ನಾದ್ಯಂತ ಸೈರನ್‌ಗಳು ಮೊಳಗುತ್ತಿವೆ. ಈ ಹಿಂಸಾಚಾರದ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭದ್ರತಾ ಮುಖ್ಯಸ್ಥರನ್ನು ಕರೆದು ಸಭೆ ನಡೆಸಿದ್ದು, ಯುದ್ಧ ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…